ADVERTISEMENT

ಕುಮಟಾ ಕೆನರಾ ಬ್ಯಾಂಕ್ ಉಚಿತ ತರಬೇತಿ: ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2025, 2:57 IST
Last Updated 19 ಡಿಸೆಂಬರ್ 2025, 2:57 IST
ಕೆನರಾ ಬ್ಯಾಂಕ್
ಕೆನರಾ ಬ್ಯಾಂಕ್   

ಕುಮಟಾ: ಇಲ್ಲಿಯ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ವಸ್ತು, ಚಿತ್ರಕಲಾ ಉದ್ಯಮ ಮತ್ತು ಪ್ಯಾಬ್ರಿಕ್ ಪೆಂಟಿಂಗ್ ಬಗ್ಗೆ 30 ದಿನಗಳ ಉಚಿತ ತರಬೇತಿ ಡಿ.22 ರಿಂದ ಜ.21 ರವರೆಗೆ ನಡೆಯಲಿದೆ.

ತರಬೇತಿಯು ಊಟ, ವಸತಿ ಸಹಿತ ಉಚಿತವಾಗಿರುತ್ತದೆ. ಸ್ವ ಉದ್ಯೋಗದಲ್ಲಿ ಆಸಕ್ತಿ ಹೊಂದಿರುವ 18ರಿಂದ 45 ವರ್ಷ ವಯಸ್ಸಿನ, ಕನಿಷ್ಠ ವಿದ್ಯಾರ್ಹತೆ ಹೊಂದಿರುವ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದು.

ಆಸಕ್ತರು ನೇರವಾಗಿ ನಿರ್ದೇಶಕರು, ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಕೈಗಾರಿಕಾ ವಸಾಹತು ಪ್ರದೇಶ, ಹೆಗಡೆ ರಸ್ತೆ, ಕುಮಟಾ-581343, ಉತ್ತರ ಕನ್ನಡ ಜಿಲ್ಲೆ ಅವರಿಗೆ ಅರ್ಜಿ ಸಲ್ಲಿಸಬಹುದು. ಮಾಹಿತಿಗೆ ಮೊ.ಸಂ: 9449860007, 9538281989 ಸಂಪರ್ಕಿಸಬಹುದು. ಗ್ರಾಮೀಣ ಪ್ರದೇಶದ ಬಡತನ ರೇಖೆಗಿಂತ ಕೆಳಗಿನ ಅಭ್ಯರ್ಥಿಗಳಿಗೆ ಆದ್ಯತೆ ನಿಡಲಾಗುವುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.