
ಪ್ರಜಾವಾಣಿ ವಾರ್ತೆಗೋಕರ್ಣ: ಇಲ್ಲಿಯ ಕುಡ್ಲೆ ಬೀಚಿನ ಪಾರ್ಕಿಂಗ್ ಸ್ಥಳದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸುತ್ತಿದ್ದ ಆರೋಪದ ಮೇಲೆ ಯುವಕನನ್ನು ಪೊಲೀಸರು ಬುಧವಾರ ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನ ಯಲಹಂಕಾದ ಸಾಹಿಲ್ ಅಮನ್ ಜಿ. ಮೊಹಿದ್ದೀನ್ (19) ಆರೋಪಿ. ಬಿ.ಎ ವಿದ್ಯಾರ್ಥಿಯಾಗಿದ್ದು, ಗೋಕರ್ಣಕ್ಕೆ ಪ್ರವಾಸಕ್ಕೆ ಬಂದಿದ್ದ ಎನ್ನಲಾಗಿದೆ. ಪಾರ್ಕಿಂಗ್ ಸ್ಥಳದಲ್ಲಿ ಅನುಮಾನಾಸ್ಪದವಾಗಿ ವರ್ತಿಸಿದಾಗ, ಸಂಶಯ ಬಂದ ಪೊಲೀಸರು ಈತನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಗಾಂಜಾ ಸೇವಿಸಿದ್ದು ಪತ್ತೆಯಾಗಿದೆ. ನಂತರ ವೈದ್ಯಕೀಯ ತಪಾಸಣೆೆಗೆ ಒಳಪಡಿಸಿದಾಗ ಗಾಂಜಾ ಸೇವಿಸಿದ್ದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗೋಕರ್ಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.