ADVERTISEMENT

ಬೆಂಕಿ ಅವಘಡ:ಸುಟ್ಟು ಕರಕಲಾದ ಕಾರು

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2025, 16:02 IST
Last Updated 11 ಏಪ್ರಿಲ್ 2025, 16:02 IST
ಕಾರವಾರ ತಾಲ್ಲೂಕಿನ ಸದಾಶಿವಗಡದಲ್ಲಿ ಬೆಂಕಿ ಅವಘಡದಿಂದ ಸುಟ್ಟು ಕರಕಲಾದ ಕಾರು
ಕಾರವಾರ ತಾಲ್ಲೂಕಿನ ಸದಾಶಿವಗಡದಲ್ಲಿ ಬೆಂಕಿ ಅವಘಡದಿಂದ ಸುಟ್ಟು ಕರಕಲಾದ ಕಾರು   

ಕಾರವಾರ: ತಾಲ್ಲೂಕಿನ ಸದಾಶಿವಗಡದ ರಾಷ್ಟ್ರೀಯ ಹೆದ್ದಾರಿ–66ರಲ್ಲಿ ಕಾರೊಂದು ಶುಕ್ರವಾರ ನಸುಕಿನ ಜಾವ ಬೆಂಕಿ ಅವಘಡದಿಂದ ಸುಟ್ಟು ಕರಕಲಾಗಿದೆ.

ನಗರದ ಸಂಕ್ರಿವಾಡಾದ ರೋಹನ್ ಎಂಬುವವರಿಗೆ ಸೇರಿದ ಕಾರು ಇದಾಗಿದ್ದು, ನಸುಕಿನ ಜಾವ 3.30ರ ಸುಮಾರಿಗೆ ದುರ್ಘಟನೆ ನಡೆದಿದೆ ಎಂದು ಚಿತ್ತಾಕುಲ ಠಾಣೆ ಪೊಲೀಸರು ತಿಳಿಸಿದ್ದಾರೆ.

‘ಕಾರಿಗೆ ಬೆಕಿ ಹೊತ್ತಿಕೊಳ್ಳಲು ಕಾರಣವೇನು ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ’ ಎಂದೂ ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.