
ಪ್ರಜಾವಾಣಿ ವಾರ್ತೆ
ಮುಂಡಗೋಡ: ತಾಲ್ಲೂಕಿನ ಗಡಿಭಾಗದ ತಾಯವ್ವನ ದೇವಸ್ಥಾನ ಹತ್ತಿರದ ರಾಜ್ಯ ಹೆದ್ದಾರಿ ತಿರುವಿನಲ್ಲಿ ಶನಿವಾರ ರಾತ್ರಿ ಕಾರು ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ.
ಪಟ್ಟಣದ ಕಂದಾಯ ಇಲಾಖೆ ಅಧಿಕಾರಿ ಗೋಪಾಲ ಎಂ. ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಗ್ರಾಮ ಲೆಕ್ಕಿಗರಾದ ಮಂಜುನಾಥ ಹಾಗೂ ಗೋವಿಂದ ತೀವ್ರ ಗಾಯಗೊಂಡಿದ್ದು, ಹುಬ್ಬಳ್ಳಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಡಸ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.