ADVERTISEMENT

ಕಾರವಾರ: ಸೇತುವೆಯಿಂದ ಬಿದ್ದ ಕಾರು, ಸ್ಥಳದಲ್ಲೇ ಇಬ್ಬರ ಸಾವು

​ಪ್ರಜಾವಾಣಿ ವಾರ್ತೆ
Published 3 ನವೆಂಬರ್ 2020, 4:11 IST
Last Updated 3 ನವೆಂಬರ್ 2020, 4:11 IST
ಸೇತುವೆಯಿಂದ ಬಿದ್ದಿರುವ ಕಾರು
ಸೇತುವೆಯಿಂದ ಬಿದ್ದಿರುವ ಕಾರು   

ಕಾರವಾರ: ನಗರದ ಲಂಡನ್ ಬ್ರಿಜ್ ಬಳಿ ಮಂಗಳವಾರ ಬೆಳಿಗ್ಗೆ ಸೇತುವೆಯಿಂದ ಸುಮಾರು 20 ಅಡಿ ಆಳಕ್ಕೆ ಕಾರೊಂದು ಬಿದ್ದು ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರನ್ನು ಚಿಕ್ಕಮಗಳೂರಿನ ಕಿರಣ್ (28) ಹಾಗೂ ರಾಕೇಶ್ ಸಿ.ಆರ್ (28) ಎಂದು ಗುರುತಿಸಲಾಗಿದೆ.

ಕಾರಿನಲ್ಲಿದ್ದ ಮತ್ತಿಬ್ಬರಿಗೆ ಗಾಯಗಳಾಗಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ADVERTISEMENT

ಕಾರು ಅಂಕೋಲಾದಿಂದ ಗೋವಾ ಕಡೆಗೆ ಹೋಗುತ್ತಿದ್ದಾಗ ಈ ಅವಘಡ ನಡೆದಿದೆ. ಕಾರವಾರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ವರ್ಷವೂ ಇದೇ ಜಾಗದಲ್ಲಿ ಎರಡು ವಾಹನಗಳು ಬಿದ್ದು, ಚಾಲಕರು ಹಾಗೂ ಪ್ರಯಾಣಿಕರು ಗಾಯಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.