ಶಿರಾ: ನಗರದ ಪ್ರೆಸಿಡೆನ್ಸಿ ಶಾಲೆಯ ಬಳಿ ಭಾನುವಾರ ರಾತ್ರಿ ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬರಗೂರು ಕಡೆಯಿಂದ ಬರುತ್ತಿದ್ದ ಕಾರು ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದಾಗ ಅದರಲ್ಲಿದ್ದ ನಗರದ ರಂಗನಾಥನಗರದ ರಂಗನಾಥ್ (45), ಮೋಹನ್ ಕುಮಾರ್ (35) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು ವಾಯು ವಿಹಾರ ನಡೆಸುತ್ತಿದ್ದ ನಾಗರತ್ನಮ್ಮ ಅವರಿಗೆ ಡಿಕ್ಕಿ ಹೊಡೆದಿದೆ. ಗಾಯಗೊಂಡ ಅವರನ್ನು ತುಮಕೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಶಿರಾ ನಗರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.