
ಸಾಂದರ್ಭಿಕ ಚಿತ್ರ
ಕಾರವಾರ: ದಾಖಲೆ ಇಲ್ಲದೆ ಖಾಸಗಿ ಬಸ್‌ನಲ್ಲಿ ಸಾಗಿಸಲಾಗುತ್ತಿದ್ದ ₹99,99,500 ನಗದನ್ನು ತಾಲ್ಲೂಕಿನ ಮಾಜಾಳಿ ಚೆಕ್‌ಪೋಸ್ಟ್‌ನಲ್ಲಿ ಮಂಗಳವಾರ ನಸುಕಿನ ಜಾವ ಚಿತ್ತಾಕುಲ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
'ರಾಜಸ್ಥಾನ ಮೂಲದ ಕಲ್ಪೇಶ್ ಮತ್ತು ಭಮ್ರುಕುಮಾರ ಎಂಬುವವರು ದಾಖಲೆ ಇಲ್ಲದೆ ಹಣ ಸಾಗಿಸುತ್ತಿದ್ದರು. ಪಣಜಿಯಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್‌ನ್ನು ಚೆಕ್‌ಪೋಸ್ಟ್‌ನಲ್ಲಿ ತಪಾಸಣೆ ನಡೆಸುವ ವೇಳೆ ಹಣ ಪತ್ತೆಯಾಗಿದೆ' ಎಂದು ಚಿತ್ತಾಕುಲ ಠಾಣೆ ಪೊಲೀಸರು ತಿಳಿಸಿದ್ದಾರೆ.
'₹500 ಮುಖಬೆಲೆಯ ನೋಟಿನ ರಾಶಿಗಳನ್ನು ಎರಡು ಬ್ಯಾಗ್‌ಗಳಲ್ಲಿ ತುಂಬಿಸಿಡಲಾಗಿತ್ತು. ಹಣಕ್ಕೆ ಸೂಕ್ತ ದಾಖಲೆ ಇರಲಿಲ್ಲ. ತಮಿಳುನಾಡಿನ ಹೊಸೂರಿಗೆ ಹಣ ಸಾಗಿಸುತ್ತಿರುವುದಾಗಿ ಆರೋಪಿಗಳು ತಿಳಿಸಿದ್ದಾರೆ. ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಕಾರಣಕ್ಕೆ ಪ್ರಕರಣ ದಾಖಲಿಸಿ, ಹಣ ವಶಕ್ಕೆ ಪಡೆಯಲಾಗಿದೆ' ಎಂದು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.