ಶಿರಸಿ: ‘ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಹುದ್ದೆ ತ್ಯಜಿಸುವ ಕಾಲ ಸನ್ನಿಹಿತವಾಗಿದೆ. ಅದಕ್ಕೆ ರಾಜಕೀಯ ಲಾಭಕ್ಕಾಗಿ ತರಾತುರಿಯಲ್ಲಿ ಜಾತಿವಾರು ಸಮೀಕ್ಷೆ ಜಾರಿಗೊಳಿಸಿದ್ದಾರೆ. ಆದರೆ, ಅದು ವಿಫಲವಾಗಿದೆ’ ಎಂದು ಶಾಸಕ ವಿ.ಸುನಿಲಕುಮಾರ ಆರೋಪಿಸಿದರು.
‘ಸಮೀಕ್ಷೆ ಸರಿಯಾಗಿ ನಡೆಸುವ ಉದ್ದೇಶ ಇದ್ದಿದ್ದರೆ, ಪೂರ್ವ ತಯಾರಿ ಮಾಡಿಕೊಳ್ಳಬೇಕಿತ್ತು. ಕಾಂತರಾಜ ಆಯೋಗದ ವರದಿಯನ್ನು ಸ್ವೀಕರಿಸದ ಅವರು, ₹ 420 ಕೋಟಿ ಬಳಸಿಕೊಂಡು ಪೂರ್ವ ಸಿದ್ಧತೆ ಮಾಡಿಕೊಳ್ಳದೇ ಸಮೀಕ್ಷೆ ಆರಂಭಿಸಿದ್ದು ಸರಿಯಲ್ಲ’ ಎಂದರು. ಪ್ರಕ್ರಿಯೆ ಕೈಗೊಂಡಿರುವುದು ಸರಿಯಲ್ಲ’ ಎಂದು ಅವರು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.
‘ಗ್ಯಾರಂಟಿ ಯೋಜನೆಗಳ ನೆಪದಲ್ಲಿ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿಯನ್ನೇ ಮರೆತಿದೆ. ಸರ್ಕಾರದ ಕಾರ್ಯವೈಖರಿ ವಿರುದ್ಧ ಜನರು ಹೋರಾಡುವ ಪರಿಸ್ಥಿತಿ ಬಂದಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.