ಹೊನ್ನಾವರ: ‘ಧರ್ಮಸ್ಥಳ ಕೇತ್ರದ ವಿರುದ್ಧ ಅಪಪ್ರಚಾರ ನಡೆಸುತ್ತಿರುವವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಇರುವ ಎಡಪಂಥೀಯರು ಹಾಗೂ ಅನ್ಯಧರ್ಮೀಯರು ರಕ್ಷಣೆ ಕೊಟ್ಟಿದ್ದಾರೆ’ ಎಂದು ಸಾಮಾಜಿಕ ಕಾರ್ಯಕರ್ತ ಚಕ್ರವರ್ತಿ ಸೂಲಿಬೆಲೆ ಆರೋಪಿಸಿದರು.
ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಖಂಡಿಸಿ ಪಟ್ಟಣದ ನಾಮಧಾರಿ ಸಭಾಭವನದ ಆವರಣದಲ್ಲಿ ಬುಧವಾರ ನಡೆದ ‘ಜನಾಗ್ರಹ ಧರ್ಮಸಭೆ’ಯಲ್ಲಿ ಮಾತನಾಡಿದರು.
ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ವಿರುದ್ಧ ನಿರಂತರವಾಗಿ ಅಪಪ್ರಚಾರ ನಡೆಸಿದರೂ ಹಿಂದೂಗಳು ಒಗ್ಗಟ್ಟಾಗಿ ಪ್ರತಿಭಟಿಸಲಿಲ್ಲ. ಜಿಹಾದಿಗಳು,ಎಡಪಂಥೀಯರು, ಕೆಲ ಹಿಂದೂಗಳು ಹಾಗೂ ಕಾಂಗ್ರೆಸ್ ಪಕ್ಷದವರು ಹಿಂದೂಗಳು ಒಗ್ಗಟ್ಟಾಗಲು ಬಿಡುತ್ತಿಲ್ಲ’ ಎಂದರು.
ನಾಗೇಶ ಕಾಮತ ಮಾತನಾಡಿದರು. ಪಟ್ಟಣ ಪಂಚಾಯಿತಿ ಅಧ್ಯಕ್ಷ ವಿಜಯ ಕಾಮತ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಎಸ್.ಹೆಗಡೆ, ಮಂಡಲ ಅಧ್ಯಕ್ಷ ಮಂಜುನಾಥ ನಾಯ್ಕ,ರಾಜು ಭಂಡಾರಿ,ಗಣಪತಿ ನಾಯ್ಕ ಬಿಟಿ, ಸಂಜು ಶೇಟ್, ಯೋಗೀಶ ಮೇಸ್ತ, ವಿಶ್ವನಾಥ ನಾಯಕ ಭಾಗವಹಿಸಿದ್ದರು.
ಮೆರವಣಿಗೆಯಲ್ಲಿ ತೆರಳಿದ ಪ್ರತಿಭಟನಾಕಾರರು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.