ADVERTISEMENT

ಮುಂಡಗೋಡ | ಸನವಳ್ಳಿ ಜಲಾಶಯದ ನೀರಿನ ಮಟ್ಟ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2023, 14:14 IST
Last Updated 12 ಡಿಸೆಂಬರ್ 2023, 14:14 IST
ಮುಂಡಗೋಡ ತಾಲ್ಲೂಕಿನ ಸನವಳ್ಳಿ ಜಲಾಶಯದ ನೀರಿನ ಮಟ್ಟವನ್ನು ಸಣ್ಣ ನೀರಾವರಿ ಇಲಾಖೆಯ ಎಇಇ ಆರ್‌.ಎಂ. ದಫೇದಾರ ವೀಕ್ಷಿಸಿದರು
ಮುಂಡಗೋಡ ತಾಲ್ಲೂಕಿನ ಸನವಳ್ಳಿ ಜಲಾಶಯದ ನೀರಿನ ಮಟ್ಟವನ್ನು ಸಣ್ಣ ನೀರಾವರಿ ಇಲಾಖೆಯ ಎಇಇ ಆರ್‌.ಎಂ. ದಫೇದಾರ ವೀಕ್ಷಿಸಿದರು   

ಮುಂಡಗೋಡ: ಪಟ್ಟಣಕ್ಕೆ ಕುಡಿಯುವ ನೀರು ಪೂರೈಕೆಯಾಗುವ ತಾಲ್ಲೂಕಿನ ಸನವಳ್ಳಿ ಜಲಾಶಯಕ್ಕೆ ಸಣ್ಣ ನೀರಾವರಿ ಇಲಾಖೆಯ ಎಇಇ ಆರ್‌.ಎಂ. ದಫೇದಾರ ಮಂಗಳವಾರ ಭೇಟಿ ನೀಡಿ, ನೀರಿನ ಮಟ್ಟ ಪರಿಶೀಲಿಸಿದರು. ಜಲಾಶಯದ ಎಡ ಹಾಗೂ ಬಲದಂಡೆ ಗೇಟ್‌ಗಳಲ್ಲಿ ನೀರು ಸೋರಿಕೆ ಆಗದಂತೆ, ಗೇಟ್‌ಗಳು ಬಂದ್‌ ಆಗಿರುವುದನ್ನು ಖಚಿತಪಡಿಸಿಕೊಂಡರು.

ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಜಲಾಶಯದಲ್ಲಿ ಸದ್ಯ ಇರುವ ನೀರನ್ನು ಮಿತವಾಗಿ ಬಳಸಲು, ಪ್ರತಿ ಮೂರು ದಿನಕ್ಕೊಮ್ಮೆ ಪಟ್ಟಣಕ್ಕೆ ಕುಡಿಯುವ ನೀರು ಪೂರೈಸಲು ಪಟ್ಟಣ ಪಂಚಾಯಿತಿ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಜಲಾಶಯದಲ್ಲಿನ ನೀರಿನ ಲಭ್ಯತೆ, ಸೋರಿಕೆ ಆಗದಂತೆ ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಲು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಮುಂದಾಗಿದ್ದಾರೆ.

ಜಲಾಶಯವು 70 ಎಕರೆ ವಿಸ್ತೀರ್ಣ ಹೊಂದಿದ್ದು, ಹತ್ತು ಮೀಟರ್‌ ನೀರು ಸಂಗ್ರಹಣಾ ಸಾಮರ್ಥ್ಯ ಹೊಂದಿದೆ. ಮಳೆಯ ಪ್ರಮಾಣ ಕಡಿಮೆ ಆಗಿರುವುದರಿಂದ ಈ ವರ್ಷ ಕೇವಲ ನಾಲ್ಕು ಮೀಟರ್‌ನಷ್ಟು ನೀರು ಮಾತ್ರ ಸಂಗ್ರಹಗೊಂಡಿತ್ತು. ಒಂದು ಮೀಟರ್‌ ಡೆಡ್‌ ಸ್ಟೋರೇಜ್‌ ಹೊರತುಪಡಿಸಿದರೆ, ಮೂರು ಮೀಟರ್‌ ನೀರಿನ ಸಂಗ್ರಹ ಸದ್ಯಕ್ಕಿದೆ. ಜಲಾಶಯದ ಒಡ್ಡಿನ ಮೇಲೆ ಬೆಳೆದಿರುವ ಗಿಡಗಂಟಿಗಳ ತೆರವಿಗೆ ಕ್ರಮ ಕೈಗೊಳ್ಳಲಾಗುವುದುʼ ಎಂದು ಆರ್‌.ಎಂ.ದಫೇದಾರ್‌ ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.