ಸಾವು
(ಪ್ರಾತಿನಿಧಿಕ ಚಿತ್ರ)
ಮುಂಡಗೋಡ: ತಾಲ್ಲೂಕಿನ ಗುಂಜಾವತಿ ಗ್ರಾಮದಲ್ಲಿ ಮನೆಯ ಎದುರಿನ ನೀರಿನ ತೊಟ್ಟಿಗೆ ಆಕಸ್ಮಿಕವಾಗಿ ಬಿದ್ದ, ಎರಡೂವರೆ ವರ್ಷದ ಮಗು ವಿನಯ ಕುಂಬಾರ ಮೃತಪಟ್ಟಿದೆ.
ಗುರುವಾರ ಮನೆಯ ಮುಂದೆ ಆಟವಾಡುತ್ತಿದ್ದ ಮಗು, ನೀರಿನ ತೊಟ್ಟಿಗೆ ಬಿದ್ದಿರುವುದನ್ನು ಗಮನಿಸಿದ ಕುಟುಂಬದವರು ತಾಲ್ಲೂಕು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿಯೇ ಮಗು ಕೊನೆಯುಸಿರೆಳೆದಿದೆ. ಪೋಷಕರ ಆಕ್ರಂದನ ಮುಗಿಲುಮುಟ್ಟಿತ್ತು. ಇಲ್ಲಿನ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.