ADVERTISEMENT

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಬಾಂಬ್ ಸ್ಫೋಟ ಪ್ರಕರಣ: ಆರೋಪಿಗಳ ಸ್ಥಿರಾಸ್ತಿಗೆ ಶೋಧ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2021, 15:57 IST
Last Updated 17 ಡಿಸೆಂಬರ್ 2021, 15:57 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಭಟ್ಕಳ: ಭಯೋತ್ಪಾದನೆ ನಿಗ್ರಹ ದಳವು (ಎ.ಟಿ.ಎಸ್), ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಬಾಂಬ್ ಸ್ಫೋಟ ಪ್ರಕರಣದ ಆರೋಪಿಗಳ ಸ್ಥಿರಾಸ್ತಿಯನ್ನು ಜಪ್ತಿ ಮಾಡುವ ಪ್ರಕ್ರಿಯೆ ಆರಂಭಿಸಿದೆ.

ಪ್ರಕರಣದ ಆರೋಪಿಗಳಾದ ಭಟ್ಕಳದ ರಿಯಾಜ್ ಮತ್ತು ಇಕ್ಬಾಲ್ ತಲೆ ಮರೆಸಿಕೊಂಡಿದ್ದಾರೆ. ಪಟ್ಟಣದಲ್ಲಿ ಅವರಿಗೆ ಸೇರಿರುವ ಆಸ್ತಿಯನ್ನು ಜಪ್ತಿ ಮಾಡುವಂತೆ ನ್ಯಾಯಾಲಯವು ಆದೇಶ ಮಾಡಿದೆ. ಈ ಸಂಬಂಧ ಎ.ಟಿ.ಎಸ್.ನ ಬೆಂಗಳೂರು ಘಟಕದ ಅಧಿಕಾರಿಗಳು ಭಟ್ಕಳದಲ್ಲಿ ಶುಕ್ರವಾರ ಶೋಧಕಾರ್ಯ ಮಾಡಿದ್ದಾರೆ.

ಸಿ.ಪಿ.ಐ ನೇತೃತ್ವದ ಮೂವರು ಅಧಿಕಾರಿಗಳು ಭಟ್ಕಳದ ಬಂದರು ರಸ್ತೆಯಲ್ಲಿರುವ ಆರೋಪಿಗಳ ಸಂಬಂಧಿಕರ ಮನೆಯಲ್ಲಿ ಶೋಧ ಕಾರ್ಯ ನಡೆಸಿದ್ದಾರೆ ಎಂದು ಗೊತ್ತಾಗಿದೆ. ಅಲ್ಲದೇ ಭಟ್ಕಳ ಪುರಸಭೆ, ಜಾಲಿ ಪಟ್ಟಣ ಪಂಚಾಯಿತಿ, ಕಂದಾಯ ಇಲಾಖೆ, ನಗರ ಪೊಲೀಸ್ ಠಾಣೆಗಳಿಗೆ ನೋಟಿಸ್ ನೀಡಿದ್ದಾರೆ. ಆರೋಪಿಗಳ ಹೆಸರಿನಲ್ಲಿರುವ ಆಸ್ತಿಗಳ ವಿವರ ಸೇರಿದಂತೆ ಇನ್ನಿತರ ಮಾಹಿತಿ ಇದ್ದರೆ ತಮ್ಮೊಂದಿಗೆ ಹಂಚಿಕೊಳ್ಳುವಂತೆ ಸೂಚಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.