ADVERTISEMENT

ಗೇಟ್ ಬಿದ್ದು ಕೈಗಾ ಅಣು ವಿದ್ಯುತ್ ಅಣುಸ್ಥಾವರದ ಸಿಐಎಸ್ಎಫ್ ಕಾನ್‌ಸ್ಟೆಬಲ್ ಸಾವು

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2025, 4:47 IST
Last Updated 9 ನವೆಂಬರ್ 2025, 4:47 IST
<div class="paragraphs"><p>ಸಾವು</p></div>

ಸಾವು

   

(ಪ್ರಾತಿನಿಧಿಕ ಚಿತ್ರ)

ಕಾರವಾರ: ತಾಲ್ಲೂಕಿನ ಕೈಗಾ ಅಣು ವಿದ್ಯುತ್ ಸ್ಥಾವರದ ಒಳ ಆವರಣದಲ್ಲಿ ಕಾವಲಿಗೆ ನಿಂತಿದ್ದ ಕೇಂದ್ರೀಯ ಕೈಗಾರಿಕೆ ಭದ್ರತಾ ಪಡೆಯ (ಸಿಐಎಸ್ಎಫ್) ಹೆಡ್ ಕಾನ್‌ಸ್ಟೆಬಲ್ ಮೈಮೇಲೆ ಗೇಟ್ ಬಿದ್ದು ಅವರು ಮೃತಪಟ್ಟಿದ್ದಾರೆ.

ADVERTISEMENT

ಮಹಾರಾಷ್ಟ್ರದ ಮಹಿಮಾನಗಡ್‌ನವರಾಗಿದ್ದ ಶೇಖರ ಭೀಮರಾವ್ ಜಗದಾಲೆ (48) ಮೃತ. ಅತಿ ಭಾರದ ಗೇಟ್ ಮೈಮೇಲೆ ಬಿದ್ದಿದ್ದರಿಂದ ಗಂಭೀರ ಗಾಯಗೊಂಡಿದ್ದ ಅವರನ್ನು ಕೈಗಾದ ಕೆಜಿಎಸ್ ಆಸ್ಪತ್ರೆಗೆ ಕರೆತರುವಷ್ಟರಲ್ಲಿಯೇ ಮೃತಪಟ್ಟಿದ್ದರು ಎಂದು ಮಲ್ಲಾಪುರ ಠಾಣೆ ಪೊಲೀಸರು ತಿಳಿಸಿದ್ದಾರೆ.

'ಅಣು ತ್ಯಾಜ್ಯ ವಿಲೇವಾರಿ ಘಟಕದ ಗೇಟ್ ಎದುರು ಶನಿವಾರ ರಾತ್ರಿ ಪಾಳಿಯಲ್ಲಿ ಕರ್ತವ್ಯದಲ್ಲಿದ್ದ ಶೇಖರ ಅವರ ಮೇಲೆ ಗೇಟ್ ಕುಸಿದು ಬಿದ್ದು ತಲೆಗೆ ಬಲವಾದ ಏಟು ಬಿದ್ದಿತ್ತು. ಅವರ ಕಿರುಚಾಟ ಕೇಳಿದ ಎಸ್‌ಟಿಎಫ್ ಸಿಬ್ಬಂದಿ ಪ್ರಾಥಮಿಕ ಚಿಕಿತ್ಸೆ ಕೇಂದ್ರಕ್ಕೆ ಕರೆದೊಯ್ದರು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಕರೆದೊಯ್ಯುವಷ್ಟರಲ್ಲಿ ಶೇಖರ ಮೃತಪಟ್ಟಿದ್ದರು' ಎಂದು ಅಣು ಸ್ಥಾವರದ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.