
ಹೊನ್ನಾವರ: ‘ದೈಹಿಕ ಹಾಗೂ ಮಾನಸಿಕ ಸ್ವಾಸ್ಥ್ಯ ಹೆಚ್ಚಿಸುವ ಭರತನಾಟ್ಯ ಮತ್ತಿತರ ನೃತ್ಯ ಪ್ರಕಾರಗಳ ಶಾಸ್ತ್ರೀಯ ಅಧ್ಯಯನ ಅಗತ್ಯ’ ಎಂದು ಸೇಂಟ್ ಇಗ್ನೇಷಿಯಸ್ ಆಸ್ಪತ್ರೆಯ ವೈದ್ಯೆ ಡಾ.ಮಂಜುಳಾ ಯುವರಾಜ್ ಹೇಳಿದರು.
ಇಲ್ಲಿಯ ಪುಷ್ಪಾಂಜಲಿ ನಾಟ್ಯ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ನ್ಯೂ ಎಜುಕೇಶನ್ ಸೊಸೈಟಿ ಅಧ್ಯಕ್ಷ ರಘುನಾಥ ಪೈ ಮಾತನಾಡಿ, ‘ಕಳೆದ 20 ವರ್ಷಗಳಿಂದ ಭರತನಾಟ್ಯ ತರಬೇತಿ ನೀಡುತ್ತಿರುವ ಪುಷ್ಪಾಂಜಲಿ ನಾಟ್ಯ ಕೇಂದ್ರದ ಕಾರ್ಯ ಶ್ಲಾಘನೀಯ’ ಎಂದು ಹೇಳಿದರು.
ಶಿಕ್ಷಕ ಎಂ.ಜಿ.ನಾಯ್ಕ, ಪತ್ರಕರ್ತ ಎಚ್.ಎಂ.ಮಾರುತಿ ಮಾತನಾಡಿದರು. ಶಿಕ್ಷಕ ಎಲ್.ಜಿ.ಭಟ್ಟ ಸ್ವಾಗತಿಸಿದರು. ಸುನಿಲ್ ಶೇಟ್ ವಂದಿಸಿದರು. ಭರತನಾಟ್ಯ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು. ಕೇಂದ್ರದ ಶಿಕ್ಷಕಿ ಪ್ರಮಿಳಾ ಕೆ.ಎಸ್.ಹಾಗೂ ಶಿಷ್ಯರಿಂದ ನಡೆದ ವಿವಿಧ ಪ್ರಕಾರದ ನೃತ್ಯ ಪ್ರದರ್ಶನ ಪ್ರೇಕ್ಷಕರಿಗೆ ಮುದ ನೀಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.