ADVERTISEMENT

ಶಿರಸಿ: ಕಾಗೇರಿ ಬೇಡಿಕೆಗೆ ಸ್ಪಂದಿಸಿದ ಸಿಎಂ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2022, 16:37 IST
Last Updated 18 ಫೆಬ್ರುವರಿ 2022, 16:37 IST

ಶಿರಸಿ: ಸಿದ್ದಾಪುರದಲ್ಲಿ ರಾಮಕೃಷ್ಣ ಹೆಗಡೆ ಅಧ್ಯಯನ ಪೀಠ ಸ್ಥಾಪನೆಗೆ ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ ಅನುಮೋದನೆ ನೀಡಬೇಕು ಎಂಬ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಬೇಡಿಕೆಗೆ ಮುಖ್ಯಮಂತ್ರಿ ಸ್ಪಂದಿಸುವ ಭರವಸೆ ನೀಡಿದ್ದಾರೆ.

ಈ ಕುರಿತು ವಿಧಾನಸಭಾ ಅಧ್ಯಕ್ಷರ ಕಾರ್ಯಾಲಯ ಪ್ರಕಟಣೆ ನೀಡಿದ್ದು, ‘ಅಧ್ಯಯನ ಪೀಠಕ್ಕೆ ಬಜೆಟ್‍ನಲ್ಲಿ ಅನುಮೋದನೆ ನೀಡುವಂತೆ ಬರೆದ ಪತ್ರಕ್ಕೆ ಮುಖ್ಯಮಂತ್ರಿ ಅವರು ಕ್ರಮಕೈಗೊಳ್ಳಲು ನಿರ್ದೇಶನ ನೀಡಿದ್ದಾಗಿ ಮುಖ್ಯಮಂತ್ರಿ ಜಂಟಿ ಕಾರ್ಯದರ್ಶಿ ಪತ್ರ ಬರೆದು ತಿಳಿಸಿದ್ದಾರೆ’ ಎಂದು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT