ADVERTISEMENT

ವಾಲ್ಮೀಕಿ ನಿಗಮದ ಹಗರಣ | ಸಿಎಂ, ಡಿಸಿಎಂ ಶಾಮೀಲು: ಪ್ರಲ್ಹಾದ್ ಜೋಶಿ

​ಪ್ರಜಾವಾಣಿ ವಾರ್ತೆ
Published 31 ಮೇ 2024, 16:04 IST
Last Updated 31 ಮೇ 2024, 16:04 IST
<div class="paragraphs"><p>ಪ್ರಲ್ಹಾದ್ ಜೋಶಿ</p></div>

ಪ್ರಲ್ಹಾದ್ ಜೋಶಿ

   

ಶಿರಸಿ: ‘ವಾಲ್ಮೀಕಿ ನಿಗಮದಲ್ಲಿ ನಡೆದ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶಾಮೀಲಾಗಿದ್ದಾರೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದರು.

‘ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದರೆ, ಸತ್ಯಾಂಶ ಹೊರಬರಲಿದೆ. ನಿಗಮದ ಅಧಿಕಾರಿಗಳನ್ನು ಮತ್ತು ಸಚಿವ ನಾಗೇಂದ್ರ ಅವರನ್ನು ಬಂಧಿಸಿ, ವಿಚಾರಣೆ ನಡೆಸಬೇಕು’ ಎಂದು ಅವರು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.

ADVERTISEMENT

‘ಪ್ರಜ್ವಲ್ ರೇವಣ್ಣ ವಿಡಿಯೊ ಪ್ರಕರಣ ನಾಗರಿಕ ಸಮಾಜ ತಲೆತಗ್ಗಿಸುವಂತದ್ದು. ಗರಿಷ್ಠ ಶಿಕ್ಷೆಯಾಗುವಂತೆ ರಾಜ್ಯ ಸರ್ಕಾರ ದಿಟ್ಟ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಅವರು ಆಗ್ರಹಿಸಿದರು.

‘ರಾಜ್ಯದ ಕಾಂಗ್ರೆಸ್ ಸರ್ಕಾರದ ಹೊಂದಾಣಿಕೆ, ಮತ ಬ್ಯಾಂಕ್ ರಾಜಕಾರಣ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೃಪಾಕಟಾಕ್ಷದಿಂದಲೇ ಪ್ರಜ್ವಲ್ ವಿದೇಶಕ್ಕೆ ತೆರಳಿದ್ದರು’ ಎಂದು ಅವರು ದೂರಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.