ಕುಮಟಾದಲ್ಲಿ ಅರಬ್ಬಿ ಸಮುದ್ರದಲ್ಲಿ ಗಸ್ತು ಕೈಗೊಂಡ ಕರಾವಳಿ ಪಡೆ ಪೊಲೀಸರು
ಕುಮಟಾ (ಉತ್ತರ ಕನ್ನಡ ಜಿಲ್ಲೆ): ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ದಾಳಿ ನಡೆಸಿದ ನಂತರ ಇಲ್ಲಿನ ಕರಾವಳಿ ಪಡೆ ಪೊಲೀಸರು ಅರಬ್ಬಿ ಸಮುದ್ರದಲ್ಲಿ ಸಂಚರಿಸುವ ಎಲ್ಲ ಬೋಟ್‌ಗಳನ್ನು ಕಟ್ಟುನಿಟ್ಟಾಗಿ ತಪಾಸಣೆ ನಡೆಸಿದ್ದಾರೆ.
‘ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ನಂತರ ಹಿರಿಯ ಅಧಿಕಾರಿಗಳ ಸೂಚನೆಯಂತೆ ಸಮುದ್ರದಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ.
ಹಿಂದೆ ಸಮುದ್ರದಲ್ಲಿ ಶಂಕಾಸ್ಪದ ಬೋಟ್‌ಗಳನ್ನು ಮಾತ್ರ ತಪಾಸಣೆ ಮಾಡಲಾಗುತ್ತಿತ್ತು. ಈಗ ಎಲ್ಲ ಯಾಂತ್ರೀಕೃತ ಹಾಗೂ ಮೀನುಗಾರಿಕಾ ಬೋಟ್‌ಗಳ ಕಡ್ಡಾಯ ತಪಾಸಣೆ ನಡೆಯಲಿದೆ. ದಾಖಲೆಗಳನ್ನೂ ಪರಿಶೀಲನೆ ಮಾಡಲಾಗುತ್ತಿದೆ’ ಎಂದು ಕರಾವಳಿ ಕಾವಲು ಪಡೆಯ ಇನ್‌ಸ್ಪೆಕ್ಟರ್ ಇ.ಸಿ. ಸಂಪತ್ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.