ಶಿರಸಿ: ನಗರದ ಅಂಜನಾದ್ರಿ ದೇವಾಲಯದ ಸಮಗ್ರ ಅಭಿವೃದ್ಧಿಗೆ ₹1 ಕೋಟಿ ಮಂಜೂರಾಗಿದ್ದು, ಶಾಸಕ ಭೀಮಣ್ಣ ನಾಯ್ಕ ಶನಿವಾರ ಬೆಟ್ಟದ ಆಂಜನೇಯ ದೇವಸ್ಥಾನದಲ್ಲಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.
2023-24ನೇ ಸಾಲಿನ ಪ್ರವಾಸೋದ್ಯಮ ಇಲಾಖೆಯಡಿ ನಗರದ ಮರಾಠಿಕೊಪ್ಪದ ಸುಭಾಷನಗರ ಆಂಜನೇಯ ಸ್ವಾಮಿ ದೇವಸ್ಥಾನ ಸುತ್ತ ತಡೆಗೋಡೆ, ಕಾಂಕ್ರೀಟ್ ರಸ್ತೆ ಮತ್ತು ಚರಂಡಿ ನಿರ್ಮಾಣ ಮಾಡಲಾಗುತ್ತಿದ್ದು, ಶಾಸಕ ಭೀಮಣ್ಣ ನಾಯ್ಕ ಚಾಲನೆ ನೀಡಿ, ಅಂಜನಾದ್ರಿ ಬೆಟ್ಟಕ್ಕೆ ಅಗತ್ಯವಿರುವ ಅನುದಾನ ನೀಡಲು ಬದ್ಧನಾಗಿದ್ದೇನೆ. ₹1 ಕೋಟಿ ವೆಚ್ಚದ ಕಾಮಗಾರಿಯನ್ನು ಕೆ.ಆರ್.ಐ.ಡಿ.ಎಲ್. ಸಂಸ್ಥೆ ನೀಡಲಾಗಿದ್ದು, ಗುಣಮಟ್ಟದ ಕಾಮಗಾರಿ ನಡೆಯಲಿ’ ಎಂದರು.
ಅಂಜನಾದ್ರಿ ಮಾರುತಿ ಸೇವಾ ಸಮಿತಿ ಗೌರವಾಧ್ಯಕ್ಷ ಶ್ರೀನಿವಾಸ ಹೆಬ್ಬಾರ್ ಮಾತನಾಡಿದರು.
ಸಮಿತಿ ಅಧ್ಯಕ್ಷ ಕಿರಣ್ ಚಿತ್ರಗಾರ, ನಗರಸಭೆ ಅಧ್ಯಕ್ಷೆ ಶರ್ಮಿಳಾ ಮಾದನಗೇರಿ, ಸದಸ್ಯ ಕಿರಣ್ ಶೆಟ್ಟರ್, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಗದೀಶ ಗೌಡ, ಪ್ರಮುಖರಾದ ಗಣೇಶ ದಾವಣಗೆರೆ, ಶ್ರೀಧರ ಮೊಗೇರ್ ಇತರರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.