ಭಟ್ಕಳ: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಗಲಾಟೆ ವಿಚಾರ ಮುಂದಿಟ್ಟು ಕೋಮು ಭಾವನೆಗೆ ಧಕ್ಕೆ ತರಲು ಯತ್ನಿಸಿದ ಪೋಸ್ಟ್ ಹಂಚಿದ್ದ ಇನ್‌ಸ್ಟಾಗ್ರಾಮ್ ಖಾತೆಗಳ ವಿರುದ್ದ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಸೋಮವಾರ ಸ್ವಯಂಪ್ರೇರಿತ ಪ್ರಕರಣ ದಾಖಲಿಸಲಾಗಿದೆ.
ನದೀಮ್‌ಬೇಗ್46 ಎನ್ನುವ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಮಾಡಿದ ಪೋಸ್ಟ್‌ಗೆ ಮಿ_ದೇವ_ರಾಜ್121 ಹೆಸರಿನ ಖಾತೆಯಿಂದ ಮಾಡಿದ ಪೋಸ್ಟ್‌ಗೆ, ಸ್ವೀಟ್_ಮುಯ್ಯು ಎಂಬ ಖಾತೆಯೊಂದಿಗೆ ಟ್ಯಾಗ್ ಮಾಡಿ ಕೋಮು ಪ್ರಚೋದಕ ಬರಹ ಪೋಸ್ಟ್ ಹಾಕಿದ್ದಾಗಿ ದೂರಿನಲ್ಲಿ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.