ಕಾರವಾರ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಏ.28 ರಂದು ಶಿರಸಿಯಲ್ಲಿ ನಡೆದ ಬಿಜೆಪಿ ವಿಜಯ ಸಂಕಲ್ಪ ಸಮಾವೇಶದಲ್ಲಿ ಗೊಂದಲ ಸೃಷ್ಟಿಸಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಟಿ.ಜಯಕುಮಾರ ವಿರುದ್ಧ ಬಿಜೆಪಿಯ ಕಾನೂನು ವಿಭಾಗದ ಮುಖ್ಯಸ್ಥ ಸಂಜಯ ಸಾಳುಂಕೆ ಜಿಲ್ಲಾ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ.
‘ಸಮಾವೇಶಕ್ಕೆ ಬರುವ ಕಾರ್ಯಕರ್ತರಿಗೆ ಅನಗತ್ಯವಾಗಿ ಕಿರಿಕಿರಿ ಉಂಟು ಮಾಡಿರುವ ಜತೆಗೆ ರಕ್ಷಣೆ ನೆಪದಲ್ಲಿ ನೂರಾರು ಕಾರ್ಯಕರ್ತರು ಬಿಸಿಲಿನಲ್ಲಿ ನಿಂತು ಕಾಯುವಂತೆ ಮಾಡಲಾಗಿದೆ. ಮೈದಾನದಲ್ಲಿ ಜಾಗವಿದ್ದರೂ ಸಾವಿರಾರು ಜನರಿಗೆ ಜಾಗ ಭರ್ತಿಯಾಗಿದೆ ಎಂದು ಪೊಲೀಸ್ ಸಿಬ್ಬಂದಿ ಮೂಲಕ ಸುಳ್ಳು ಹೇಳಿಸಿ ಸಮಾವೇಶ ಯಶಸ್ವಿಯಾಗದಂತೆ ಮಾಡಲು ಜಯಕುಮಾರ ಪ್ರಯತ್ನಿಸಿದ್ದಾರೆ’ ಎಂದು ದೂರಿದ್ದಾರೆ.
‘ಚುನಾವಣೆ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಜಯಕುಮಾರ ಅವರನ್ನು ವರ್ಗಾವಣೆಗೊಳಿಸಬೇಕು. ಮೋದಿ ಸಮಾವೇಶ ಯಶಸ್ವಿಯಾಗದಂತೆ ನೋಡಿಕೊಳ್ಳಲು ಅವರ ಮೇಲೆ ಯಾರು ಒತ್ತಡ ಹೇರಿದ್ದಾರೆ ಎಂಬುದರ ತನಿಖೆಯಾಗಬೇಕು’ ಎಂದು ಒತ್ತಾಯಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.