ADVERTISEMENT

ಪ್ರಕೃತಿ ವಿಕೋಪ: ₹ 54 ಲಕ್ಷ ಪರಿಹಾರ ವಿತರಣೆ

​ಪ್ರಜಾವಾಣಿ ವಾರ್ತೆ
Published 23 ಜೂನ್ 2018, 16:12 IST
Last Updated 23 ಜೂನ್ 2018, 16:12 IST
ಎಸ್.ಎಸ್.ನಕುಲ್
ಎಸ್.ಎಸ್.ನಕುಲ್   

ಕಾರವಾರ: ಜಿಲ್ಲೆಯ ವಿವಿಧೆಡೆ ಈ ವರ್ಷ ಪ್ರಕೃತಿ ವಿಕೋಪದಿಂದ ಹಾನಿಗೀಡಾದವರಿಗೆ ಈವರೆಗೆ ₹ 54.07 ಲಕ್ಷ ಪರಿಹಾರ ವಿತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ತಿಳಿಸಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಏಪ್ರಿಲ್ 1ರಿಂದ ಈವರೆಗೆ ಜಿಲ್ಲೆಯಲ್ಲಿ ಪ್ರಕೃತಿ ವಿಕೋಪದಿಂದಾಗಿ ಮೂವರು ಮೃತಪಟ್ಟಿದ್ದಾರೆ. ಅವರ ಕುಟುಂಬಗಳಿಗೆತಲಾ ₹ 4 ಲಕ್ಷ ಪರಿಹಾರ ವಿತರಿಸಲಾಗಿದೆ. ಅಲ್ಲದೆ, ಜಿಲ್ಲೆಯಾದ್ಯಂತ ಒಟ್ಟು25 ಜಾನುವಾರು ಮೃತಪಟ್ಟಿದ್ದು ಒಟ್ಟು ₹ 7.16 ಲಕ್ಷ ಸೇರಿ ಪರಿಹಾರ ನೀಡಲಾಗಿದೆ’ ಎಂದು ತಿಳಿಸಿದರು.

ಮಳೆಯಿಂದಾಗಿ ಜಿಲ್ಲೆಯಲ್ಲಿ270ಮನೆಗಳಿಗೆ ಹಾನಿಯಾಗಿದ್ದು, ₹56.23 ಲಕ್ಷ ಪರಿಹಾರ ವಿತರಿಸಲಾಗಿದೆ. 138 ಪ್ರಕರಣಗಳಿಗೆ ಪರಿಹಾರ ಮಂಜೂರಾಗಿದ್ದು ಅದರಲ್ಲಿ109ಪ್ರಕರಣಗಳನ್ನು ತಿರಸ್ಕರಿಸಲಾಗಿದೆ.23 ಪ್ರಕರಣಗಳಿಗೆ ಸಂಬಂಧಿಸಿದಂತೆ ಶೀಘ್ರವೇ ಪರಿಹಾರ ವಿತರಣೆಮಾಡಲಾಗುವುದುಎಂದು ಅವರು ಹೇಳಿದರು.

ADVERTISEMENT

ಜಿಲ್ಲೆಯಲ್ಲಿ 50.91 ಹೆಕ್ಟೇರ್ ಬೆಳೆ ಹಾನಿಯಾಗಿದ್ದು,154ಪ್ರಕರಣಗಳನ್ನು ಇತ್ಯರ್ಥಪಡಿಸಬೇಕಿದೆ.61ಪ್ರಕರಣಗಳಲ್ಲಿ ಪರಿಹಾರ ವಿತರಿಸಲಾಗಿದೆ. ಇತ್ಯರ್ಥವಾಗಬೇಕಿರುವ ಪ್ರಕರಣಗಳಲ್ಲಿ ಪರಿಹಾರ ವಿತರಣೆಗೆ ಈಗಾಗಲೇ ಎಲ್ಲ ತಹಶೀಲ್ದಾರ್‌ಗಳಿಗೆಪ್ರಕೃತಿ ವಿಕೋಪ ನಿಧಿಯಿಂದ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.