ADVERTISEMENT

ಬಿಜೆಪಿಗರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 10 ಜುಲೈ 2019, 11:27 IST
Last Updated 10 ಜುಲೈ 2019, 11:27 IST
ಶಿರಸಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು
ಶಿರಸಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು   

ಶಿರಸಿ: ಬಿಜೆಪಿ ನಾಯಕರು ವಾಮಮಾರ್ಗದಿಂದ ರಾಜ್ಯದ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ, ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ಇಲ್ಲಿ ಪ್ರತಿಭಟನೆ ನಡೆಸಿದರು.

ಬಿಜೆಪಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕರ್ನಾಟಕದಲ್ಲಿ ಉತ್ತಮ ಆಡಳಿತ ನೀಡುತ್ತಿದ್ದ ಸಮ್ಮಿಶ್ರ ಸರ್ಕಾರವನ್ನು ಬೀಳಿಸಲು ಬಿಜೆಪಿ ಹುನ್ನಾರ ನಡೆಸುತ್ತಿದೆ. ವಾಮಮಾರ್ಗದ ಮೂಲಕ ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಯತ್ನಿಸುತ್ತಿದೆ. ಮಹಾರಾಷ್ಟ್ರ ಸರ್ಕಾರ ಕೂಡ ಇದಕ್ಕೆ ಸಂಪೂರ್ಣ ಬೆಂಬಲ ನೀಡುತ್ತಿದೆ. ಬಿಜೆಪಿ ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡುತ್ತಿದೆ. ಬಿಜೆಪಿ ಇದೇ ರೀತಿ ವರ್ತಿಸಿದರೆ ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿರುವುದು ಸರಿಯಲ್ಲ. ಕೂಡಲೇ ಸರ್ಕಾರದ ಜೊತೆ ಕೈಜೋಡಿಸಬೇಕು ಎಂದು ಒತ್ತಾಯಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಶ ಗೌಡ, ಪ್ರಮುಖರಾದ ಎಸ್.ಕೆ.ಭಾಗವತ, ರಮೇಶ ದುಬಾಶಿ, ಸತೀಶ ನಾಯ್ಕ ಮಧುರವಳ್ಳಿ, ಮಾಧವ ರೇವಣಕರ್, ಪ್ರಸನ್ನ ಶೆಟ್ಟಿ, ಶೈಲೇಶ ಜೋಗಳೇಕರ್, ರಮ್ಯಾ ಚಂದಾವರ, ಗಾಯತ್ರಿ ನೇತ್ರೇಕರ, ಪ್ರದೀಪ ಶೆಟ್ಟಿ, ಖಾದರ್ ಆನವಟ್ಟಿ, ರಾಚಪ್ಪ ಜೋಗಳೇಕರ್, ಅಬ್ಬಾಸ್ ತೋನ್ಸೆ, ಗಿರಿಜಾ ನಾಯ್ಕ, ಎನ್.ವಿ.ನಾಯ್ಕ, ಜಿ.ಎಸ್.ಹಿರೇಮಠ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.