ADVERTISEMENT

ಇಂಧನ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 3 ಜುಲೈ 2020, 16:27 IST
Last Updated 3 ಜುಲೈ 2020, 16:27 IST
ಶಿರಸಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು
ಶಿರಸಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು   

ಶಿರಸಿ: ನಿರಂತರವಾಗಿ ಏರುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕೇಂದ್ರ ಸರ್ಕಾರ ನಿಯಂತ್ರಿಸುತ್ತಿಲ್ಲ ಎಂದು ಆರೋಪಿಸಿ, ಕಾಂಗ್ರೆಸ್ ಪಕ್ಷದ ವತಿಯಿಂದ ಶುಕ್ರವಾರ ಇಲ್ಲಿ ಪ್ರತಿಭಟನೆ ನಡೆಯಿತು.

ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಕಾಂಗ್ರೆಸ್ ಕಾರ್ಯಕರ್ತರು, ತಹಶೀಲ್ದಾರ್ ಎಂ.ಆರ್.ಕುಲಕರ್ಣಿ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಭೀಮಣ್ಣ ನಾಯ್ಕ ಅವರು, ‘ಕಚ್ಚಾ ತೈಲದ ಬೆಲೆ ಇಳಿದರೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತಿದೆ. ದೇಶದ ಸ್ಥಿತಿ ಚಿಂತಾಜನಕವಾಗಿದೆ. ದೇಶದಲ್ಲಿ ಸಾಂಕ್ರಾಮಿಕ ಕಾಯಿಲೆಯಿಂದ ಜನರು ತೊಂದರೆಯಲ್ಲಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಬೆಲೆ ಏರಿಕೆ ಮಾಡುತ್ತಿದೆ’ ಎಂದು ಆರೋಪಿಸಿದರು.

ಪ್ರಮುಖರಾದ ಜಗದೀಶ ಗೌಡ, ವಿ.ಎಸ್.ಆರಾಧ್ಯ, ಎಸ್.ಕೆ.ಭಾಗವತ, ರಮೇಶ ದುಬಾಶಿ, ದೀಪಕ ದೊಡ್ಡೂರು, ಜಿ.ಎನ್.ಹೆಗಡೆ ಮುರೇಗಾರ, ರಾಜು ಉಗ್ರಾಣಕರ, ರುಬೇಕಾ ಫರ್ನಾಂಡೀಸ್, ಪ್ರಸನ್ನ ಶೆಟ್ಟಿ, ಜಬೀವುಲ್ಲಾ, ಪ್ರವೀಣ ಗೌಡ, ಶೈಲೇಶ ಇದ್ದರು. ಸತೀಶ ನಾಯ್ಕ ಮನವಿ ಓದಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.