ಕಾರವಾರ: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ, ಎಫ್.ಟಿ.ಎಸ್.ಸಿ – 1 ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್ನ್ಯಾಯಾಲಯವು10 ವರ್ಷ ಕಠಿಣ ಜೈಲು ಶಿಕ್ಷೆ, ₹ 10 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.
ಈ ಅಪರಾಧಿಯು 2017ರ ಏ.29ರಂದು ಮಾವಿನ ತೋಟದಲ್ಲಿ ಒಬ್ಬಳೇ ಇದ್ದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಬಾಲಕಿಯ ಅಜ್ಜಿ ಬರುವುದನ್ನು ಕಂಡು ಪರಾರಿಯಾಗಿದ್ದ ಆತನನ್ನು ಮುಂಡಗೋಡ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದರು.
ಅಂದಿನ ಸಿ.ಪಿ.ಐ. ಕಿರಣ ಕುಮಾರ ಈ ಪ್ರಕರಣದ ತನಿಖೆ ನಡೆಸಿ, ಪೊಕ್ಸೊಕಾಯ್ದೆಯ ಅನ್ವಯ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಹಾಗೂಸೆಷನ್ಸ್ನ್ಯಾಯಾಧೀಶರಾದ ಶಿವಾಜಿ ಅನಂತ ನಲವಡೆ, ಅಪರಾಧಿಗೆ ಶಿಕ್ಷೆ ವಿಧಿಸಿ ಸೋಮವಾರ ತೀರ್ಪು ನೀಡಿದ್ದಾರೆ.ದಂಡ ಪಾವತಿಸಲು ತಪ್ಪಿದಲ್ಲಿಆರುತಿಂಗಳು ಹೆಚ್ಚುವರಿಜೈಲು ಶಿಕ್ಷೆ ವಿಧಿಸುವಂತೆಯೂ ಅವರು ಆದೇಶಿಸಿದ್ದಾರೆ.
ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಸುಭಾಷ ಪಿ. ಕೈರನ್ನ ವಾದ ಮಂಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.