ಕಾರವಾರ: ಮಹಾರಾಷ್ಟ್ರದಿಂದ ಹೊನ್ನಾವರಕ್ಕೆ ವಾಪಸ್ಸಾಗಿರುವ 50 ವರ್ಷದ ಪುರುಷನಲ್ಲಿ (ರೋಗಿ ಸಂಖ್ಯೆ 2176) ಕೋವಿಡ್-19 ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 36ಕ್ಕೇರಿದೆ.
ಜಿಲ್ಲೆಯಲ್ಲಿ ಈಗಾಗಲೇ 69 ಮಂದಿಗೆ ಸೋಂಕು ತಗುಲಿದ್ದು, 33 ಮಂದಿ ಗುಣಮುಖರಾಗಿದ್ದಾರೆ. ಕೋವಿಡ್ 19 ಸೋಂಕಿತ 18 ವರ್ಷದ ಯುವತಿಯೂ (ರೋಗಿ ಸಂಖ್ಯೆ 659) ಸೋಂಕು ಮುಕ್ತರಾಗಿದ್ದು, ಭಾನುವಾರ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಅವರನ್ನು ಭಟ್ಕಳದ ಸಾಂಸ್ಥಿಕ ಕ್ವಾರಂಟೈನ್ ಕೇಂದ್ರಕ್ಕೆ ಕಳುಹಿಸಲಾಗಿದೆ. ಉಳಿದ ಕೆಲವು ಸೋಂಕಿತರೂ ಸಂಪೂರ್ಣ ಚೇತರಿಸಿಕೊಂಡಿದ್ದು, ಮಂಗಳವಾರ ಬಿಡುಗಡೆಯಾಗುವ ಸಾಧ್ಯತೆಯಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.