ADVERTISEMENT

ಕಳ್ಳತನದ ಆರೋಪದಲ್ಲಿ ಬಂಧಿಸಿದ್ದ ಆರೋಪಿಗೆ ಕೋವಿಡ್-19 ಸೋಂಕು

​ಪ್ರಜಾವಾಣಿ ವಾರ್ತೆ
Published 28 ಜೂನ್ 2020, 8:00 IST
Last Updated 28 ಜೂನ್ 2020, 8:00 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶಿರಸಿ: ಬೈಕ್ ಕಳ್ಳತನದ ಆರೋಪದ ಮೇಲೆ ಇಲ್ಲಿನ ನಗರ ಠಾಣೆ ಪೊಲೀಸರು ಐದು ದಿನಗಳ ಹಿಂದೆ ಬಂಧಿಸಿದ್ದ ಆರೋಪಿಗೆ ಕೋವಿಡ್- 19 ದೃಢಪಟ್ಟಿದೆ.

ಧಾರವಾಡದಲ್ಲಿ ಬಂಧಿಸಿದ್ದ ಆರೋಪಿಯನ್ನು, ಶಿರಸಿಗೆ ಕರೆತಂದು, ಸಬ್‌ಜೈಲ್‌ನಲ್ಲಿ ಇಡಲಾಗಿತ್ತು.

'ಆರೋಪಿಗಳನ್ನು ಕರೆತರುವಾಗ ಪೊಲೀಸರು ಪಿಪಿಇ ಕಿಟ್ ಧರಿಸಿ, ಎಲ್ಲ ಸುರಕ್ಷಾ ಕ್ರಮಗಳನ್ನು ಕೈಗೊಂಡಿದ್ದರು. ಆದರೂ, ಮುನ್ನೆಚ್ಚರಿಕೆಯಾಗಿ ಸಂಬಂಧಪಟ್ಟ‌ ನಾಲ್ವರು ಪೊಲೀಸರನ್ನು ಕ್ವಾರಂಟೈನ್ ಮಾಡಲಾಗಿದೆ. ಅವರ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಲಾಗುವುದು. ಸಬ್‌ಜೈಲ್‌ನಲ್ಲಿ ಎಲ್ಲ ಆರೋಪಿಗಳನ್ನು ಪ್ರತ್ಯೇಕ ಸೆಲ್‌ನಲ್ಲಿ ಇಡಲಾಗಿದೆ. ಮುನ್ನೆಚ್ಚರಿಕೆಯಾಗಿ ಅವರ ಗಂಟಲು ದ್ರವದ ಮಾದರಿ‌ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗುವುದು' ಎಂದು ಉಪ ವಿಭಾಗಾಧಿಕಾರಿ ಡಾ.ಈಶ್ವರ ಉಳ್ಳಾಗಡ್ಡಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.