ADVERTISEMENT

ಹೊನ್ನಾವರ | ಗರ್ಭ ಧರಿಸಿದ್ದ ಗೋ ವಧೆ: ದುಷ್ಕರ್ಮಿಗಳ ವಿರುದ್ಧ ದೂರು ದಾಖಲು

​ಪ್ರಜಾವಾಣಿ ವಾರ್ತೆ
Published 19 ಜನವರಿ 2025, 13:56 IST
Last Updated 19 ಜನವರಿ 2025, 13:56 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಹೊನ್ನಾವರ (ಉತ್ತರ ಕನ್ನಡ): ತಾಲ್ಲೂಕಿನ ಸಾಲ್ಕೋಡ ಕೊಂಡಾಕುಳಿ ರಸ್ತೆ ಪಕ್ಕದ ಬೆಟ್ಟವೊಂದರಲ್ಲಿ ಮೇಯಲು ಬಿಟ್ಟಿದ್ದ ಹಸುವೊಂದನ್ನು ದುಷ್ಕರ್ಮಿಗಳು ಮಾಂಸಕ್ಕಾಗಿ ಕೊಂದು, ಮೃತ ಹಸುವಿನ ಹೊಟ್ಟೆಯಲ್ಲಿದ್ದ ಭ್ರೂಣಾವಸ್ಥೆಯ ಕರುವನ್ನು ಬಿಟ್ಟು ಪರಾರಿಯಾಗಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಮೃತ ಹಸುವಿನ ಮಾಲೀಕ ಕೃಷ್ಣ ನಾರಾಯಣ ಆಚಾರಿ ಭಾನುವಾರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ADVERTISEMENT

‘10 ವರ್ಷಗಳಿಂದ ನಾನು ಸಾಕಿದ್ದ ಕಪ್ಪು ಬಣ್ಣದ ಆಕಳನ್ನು ಶನಿವಾರ ಕಳವು ಮಾಡಿ ಅದನ್ನು ಸಾಯಿಸಿ ಮೃತ ಆಕಳಿನ ಕಾಲುಗಳು, ಕೋಡುಗಳು ಹಾಗೂ ಅದರ ಗರ್ಭದಲ್ಲಿದ್ದ ಭ್ರೂಣಾವಸ್ಥೆಯ ಕರುವನ್ನು ಮಾತ್ರ ಸ್ಥಳದಲ್ಲಿ ಬಿಟ್ಟು ಮಾಂಸವನ್ನು ತೆಗೆದುಕೊಂಡು ಹೋಗಿದ್ದಾರೆ’ ಎಂದು ದೂರಿನಲ್ಲಿ ತಿಳಿಸಿದ್ದಾರೆ.

‘ಘಟನೆಗೆ ಸಂಬಂಧಿಸಿದ ಆರೋಪಿಗಳ ಪತ್ತೆಯಾಗಿಲ್ಲ. ತನಿಖೆ ಕೈಗೊಳ್ಳಲಾಗಿದೆ' ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.