ADVERTISEMENT

ಅಕಾಲಿಕ ಮಳೆಗೆ ಬೆಳೆ ಹಾನಿ: ರೈತ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2021, 4:42 IST
Last Updated 20 ನವೆಂಬರ್ 2021, 4:42 IST
   

ಶಿರಸಿ: ಅಕಾಲಿಕ ಮಳೆಯಿಂದ ಫಸಲು ನಾಶವಾಗಿದ್ದಕ್ಕೆ ಬೇಸರಗೊಂಡ ತಾಲ್ಲೂಕಿನ ನರೂರು ಗ್ರಾಮದ ರೈತರೊಬ್ಬರು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗಂಗಾಧರ ಫಕೀರಣ್ಣ ಶೇಷಣ್ಣನವರ (58) ಆತ್ಮಹತ್ಯೆ ಮಾಡಿಕೊಂಡ ರೈತ.

'ಮಳೆಯಿಂದ ಭತ್ತ, ಶುಂಠಿ ಬೆಳೆ ಹಾನಿಯಾಗಿದ್ದಕ್ಕೆ ಬೇಸರಗೊಂಡಿದ್ದರು. ನ.17 ರಂದು ಕೀಟನಾಶಕ ಸೇವಿಸಿದ್ದರು. ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆಗೆ ಸ್ಪಂದಿಸದೆ ನ.19 ರಂದು ಮೃತಪಟ್ಟಿದ್ದಾರೆ' ಎಂದು ಬನವಾಸಿ ಠಾಣೆ ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.