ADVERTISEMENT

₹1.61 ಕೋಟಿ ಕಳೆದುಕೊಂಡ ನಿವೃತ್ತ ಶಿಕ್ಷಕ

​ಪ್ರಜಾವಾಣಿ ವಾರ್ತೆ
Published 31 ಡಿಸೆಂಬರ್ 2025, 20:58 IST
Last Updated 31 ಡಿಸೆಂಬರ್ 2025, 20:58 IST
<div class="paragraphs"><p>ಡಿಜಿಟಲ್ ಅರೆಸ್ಟ್</p></div>

ಡಿಜಿಟಲ್ ಅರೆಸ್ಟ್

   

ಐಸ್ಟಾಕ್ ಚಿತ್ರ

ಮುಂಡಗೋಡ: ತಾಲ್ಲೂಕಿನ ಟಿಬೆಟಿಯನ್ ಕಾಲೊನಿಯ ನಿವೃತ್ತ ಶಿಕ್ಷಕ ಪಾಲ್ದೆನ್ ಲೋಸಂಗ ಚೋಡಕ್ ಸೈಬರ್ ವಂಚಕರ ಜಾಲಕ್ಕೆ ಸಿಲುಕಿ ₹1.61 ಕೋಟಿ ಕಳೆದುಕೊಂಡಿದ್ದು, ಇವರನ್ನು ‘ಡಿಜಿಟಲ್ ಅರೆಸ್ಟ್’ ಮಾಡಿ ವಂಚಕರು ಹಂತ ಹಂತವಾಗಿ ಹಣ ದೋಚಿದ್ದಾರೆ.

ADVERTISEMENT

ಘಟನೆಯ ವಿವರ: ನ.29ರಂದು ನಿವೃತ್ತ ಶಿಕ್ಷಕ ಪಾಲ್ಡೆನ್ ಅವರಿಗೆ ವಾಟ್ಸ್‌ಆ್ಯಪ್ ಕರೆ ಮಾಡಿದ ವ್ಯಕ್ತಿಯೊಬ್ಬ, ತಾನು ಮಹಾರಾಷ್ಟ್ರದ ಕೋಲಬಾ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಎಂದು ಪರಿಚಯಿಸಿಕೊಂಡು, ಪೊಲೀಸ್ ಸಮವಸ್ತ್ರದಲ್ಲಿಯೇ ವಿಡಿಯೊ ಕರೆ ಮಾಡಿದ್ದಾನೆ. ಮುಂಬೈನಲ್ಲಿ ಉಗ್ರವಾದಿ ನಾಯಕನನ್ನು ಬಂಧಿಸಲಾಗಿದ್ದು, ಆತನ ಬಳಿ ಸಿಕ್ಕ ನೂರಾರು ಎ.ಟಿ.ಎಂ ಕಾರ್ಡ್‌ಗಳಲ್ಲಿ ನಿಮ್ಮ ಹೆಸರಿನ ಬ್ಯಾಂಕ್ ಕಾರ್ಡ್ ಕೂಡ ಇದೆ. ನಿಮ್ಮ ಬ್ಯಾಂಕ್ ಖಾತೆಯ ಮೂಲಕ ಕೋಟ್ಯಂತರ ರೂಪಾಯಿ ಮನಿ ಲಾಂಡ್ರಿಂಗ್ ನಡೆದಿದ್ದು, ನಿಮ್ಮ ಮೇಲೆ ಗಂಭೀರ ಪ್ರಕರಣ ದಾಖಲಾಗಿದೆ. ಅರೆಸ್ಟ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

ವಿಷಯವನ್ನು ಯಾರೊಂದಿಗೂ ಹಂಚಿಕೊಳ್ಳದಂತೆ ತಿಳಿಸಿದ್ದಾನೆ. ಇದನ್ನು ನಂಬಿದ ಪಾಲ್ಡೆನ್, ತಮ್ಮ ವಿವಿಧ ಬ್ಯಾಂಕ್‌ ಖಾತೆಗಳಲಿದ್ದ ಠೇವಣಿ ಹಣವನ್ನು ಡ್ರಾ ಮಾಡಿ, ಡಿ.3ರಿಂದ ಡಿ.11ರ ವರೆಗೆ ವಂಚಕರು ಸೂಚಿಸಿದ ವಿವಿಧ ಬ್ಯಾಂಕ್ ಖಾತೆಗಳಿಗೆ ಒಟ್ಟು ₹1.61 ಕೋಟಿ ವರ್ಗಾಯಿಸಿದ್ದಾರೆ. ಕೆಲ ದಿನಗಳ ನಂತರ ತಾನು ವಂಚನೆಗೆ ಒಳಗಾಗಿರುವುದು ತಿಳಿದು ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.