ADVERTISEMENT

ಪರಿಶಿಷ್ಟರಿಗೆ ಶೇ 24ರಷ್ಟು ಅನುದಾನ ಮೀಸಲಿಡಲು ಒತ್ತಾಯ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2026, 7:24 IST
Last Updated 11 ಫೆಬ್ರುವರಿ 2026, 7:24 IST
ರಾಜ್ಯ ಬಜೆಟ್‌ನಲ್ಲಿ ಪರಿಶಿಷ್ಟರ ಜನಸಂಖ್ಯೆಗೆ ಅನುಗುಣವಾಗಿ ಶೇ 24ರಷ್ಟು ಅನುದಾನ ಮೀಸಲಿಡಬೇಕು ಎಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಅವರಿಗೆ ಮನವಿ ಸಲ್ಲಿಸಲಾಯಿತು.
ರಾಜ್ಯ ಬಜೆಟ್‌ನಲ್ಲಿ ಪರಿಶಿಷ್ಟರ ಜನಸಂಖ್ಯೆಗೆ ಅನುಗುಣವಾಗಿ ಶೇ 24ರಷ್ಟು ಅನುದಾನ ಮೀಸಲಿಡಬೇಕು ಎಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಅವರಿಗೆ ಮನವಿ ಸಲ್ಲಿಸಲಾಯಿತು.   

ಕಾರವಾರ: 2026–27ನೇ ಸಾಲಿನ ಬಜೆಟ್‌ನಲ್ಲಿ ಪರಿಶಿಷ್ಟರ ಜನಸಂಖ್ಯೆಗೆ ಅನುಗುಣವಾಗಿ ಶೇ 24ರಷ್ಟು ಅನುದಾನ ಮೀಸಲಿಡಬೇಕು, ಹಣ ದುರ್ಬಳಕೆ ತಡೆಯಲು ಎಸ್‌ಸಿಪಿ ಟಿಎಸ್‌ಪಿ ಕಾಯ್ದೆಯ ಸೆಕ್ಷನ್ 7(ಸಿ) ರದ್ದುಪಡಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದಿಂದ ಮಂಗಳವಾರ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಅವರಿಗೆ ಮನವಿ ಸಲ್ಲಿಸಲಾಯಿತು.

‘ಬಡತನ ರೇಖೆಗಿಂತ ಕೆಳಗಿನ ನಿವೇಶನ ರಹಿತ ಕುಟುಂಬಗಳಿಗೆ ನಿವೇಶನ ಹಂಚಿಕೆ ಮಾಡಲು ಸರ್ಕಾರ ಖರೀದಿಸುವ ಖಾಸಗಿ ಜಮೀನುಗಳ ದರಗಳನ್ನು ಮೂರ್ನಾಲ್ಕು ಪಟ್ಟು ಹೆಚ್ಚಳ ಮಾಡಬೇಕು. ನಿವೇಶನ ರಹಿತರಿಗೆ ವಸತಿಗೆ ಯೋಗ್ಯವಾದ ಸರ್ಕಾರಿ ಭೂಮಿ ಮಂಜೂರು ಮಾಡಬೇಕು. ವಿವಿಧ ವಸತಿ ಯೋಜನೆಗಳಡಿಯಲ್ಲಿ ಮನೆಗಳ ನಿರ್ಮಾಣಕ್ಕೆ ನೀಡುತ್ತಿರುವ ನಿರ್ಮಾಣ ವೆಚ್ಚವನ್ನು ₹5 ಲಕ್ಷಕ್ಕೆ ಏರಿಕೆ ಮಾಡಬೇಕು’ ಎಂದು ಒತ್ತಾಯಿಸಿದರು.

‘ಅರಣ್ಯ ಮತ್ತು ಅರಣ್ಯಾಧಾರಿತ ಆದಿವಾಸಿ ಕುಟುಂಬಗಳ ವಸತಿ ರಹಿತರಿಗೆ ಮುಖ್ಯಮಂತ್ರಿ ಆದಿವಾಸಿ ಗೃಹಭಾಗ್ಯ ಯೋಜನೆಯಡಿ ವಸತಿ ಸೌಲಭ್ಯ ಕಲ್ಪಿಸಬೇಕು. ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿಗೆ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳ ಘಟಕ ವೆಚ್ಚ ಎರಡು ಪಟ್ಟು ಹೆಚ್ಚಿಸಬೇಕು. ಲಿಡ್ಕರ್ ನಿಗಮಕ್ಕೆ ₹500 ಕೋಟಿ ಅನುದಾನ ಬಿಡುಗಡೆ ಮಾಡಬೇಕು’ ಎಂದು ಒತ್ತಾಯಿಸಿದರು.

ADVERTISEMENT

ಸಮಿತಿಯ ರಾಜ್ಯ ಘಟಕದ ಸಂಚಾಲಕ ಎಸ್.ಫಕೀರಪ್ಪ, ಜಿಲ್ಲಾ ಘಟಕದ ಪದಾಧಿಕಾರಿಗಳಾದ ಮಂಜುನಾಥ ಹಳ್ಳೇರ, ಗೋಪಾಲ ನಡಕಿನಮನಿ, ಹನುಮಂತ ಮೇತ್ರಿ, ಲೋಕೆಶ ನೀರಲಗಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.