ADVERTISEMENT

ದೇಶದಲ್ಲಿ ಪ್ರಜಾಪ್ರಭುತ್ವದ ಕಗ್ಗೋಲೆ ನಡೆಯುತ್ತಿದೆ: ಮೋಹನ ಹಲವಾಯಿ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2025, 5:13 IST
Last Updated 17 ಆಗಸ್ಟ್ 2025, 5:13 IST
ದಾಂಡೇಲಿಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮತಗಳ್ಳರೇ ಅಧಿಕಾರ ಬಿಡಿ ಪ್ರಜಾಪ್ರಭುತ್ವ ಉಳಿಸಿ ಘೋಷಣೆಯೊಂದಿಗೆ ಪ್ರತಿಭಟನಾ ಮೆರವಣಿಗೆ ಶುಕ್ರವಾರ ನಗರದ ಪ್ರಮುಖ ಬೀದಿಗಳಲ್ಲಿ ನಡೆಯಿತು.
ದಾಂಡೇಲಿಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮತಗಳ್ಳರೇ ಅಧಿಕಾರ ಬಿಡಿ ಪ್ರಜಾಪ್ರಭುತ್ವ ಉಳಿಸಿ ಘೋಷಣೆಯೊಂದಿಗೆ ಪ್ರತಿಭಟನಾ ಮೆರವಣಿಗೆ ಶುಕ್ರವಾರ ನಗರದ ಪ್ರಮುಖ ಬೀದಿಗಳಲ್ಲಿ ನಡೆಯಿತು.   

ದಾಂಡೇಲಿ: 'ಮತಗಳ್ಳರೇ ಅಧಿಕಾರ ಬಿಡಿ' ಸಂವಿಧಾನ ರಕ್ಷಿಸಿ ಪ್ರಜಾಪ್ರಭುತ್ವ ಉಳಿಸಿ' ಘೋಷಣೆಯೊಂದಿಗೆ ದಾಂಡೇಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನಾ ಮೆರವಣಿಗೆಯನ್ನು ಸೋಮಾನಿ ವೃತ್ತದಿಂದ ಪಟೇಲ್ ವೃತ್ತದ ವರೆಗೆ ಶುಕ್ರವಾರ ನಡೆಯಿತು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಹಲವಾಯಿ ಮಾತನಾಡಿ, ಸ್ವಾತಂತ್ರೋತ್ಸವ ಆಚರಣೆಯ ಈ ಸುಸಂದರ್ಭದಲ್ಲಿ ದೇಶಾದ್ಯಂತ ಪ್ರಜಾಪ್ರಭುತ್ವದ ಕಗ್ಗೋಲೆ ನಡೆಯುತ್ತಿದೆ, ದೇಶದ ಮುಂದಿನ ಪ್ರಧಾನಿ ರಾಹುಲ್ ಗಾಂಧಿ ನೇತೃತ್ವದಲ್ಲಿ ದೇಶಾದ್ಯಂತ ಈ ಪ್ರತಿಭಟನೆ ನಡೆಸಲಾಗುತ್ತಿದೆ. ಪ್ರಜಾಪ್ರಭುತ್ವ ಉಳಿದರೆ ಮಾತ್ರ ನಾವು ಸ್ವಾತಂತ್ರವಾಗಿ ಬದುಕು ಕಟ್ಟಿಕೊಳ್ಳಬಹುದು. ಆದರೆ,ಬಿಜೆಪಿ ಅವಧಿಯಲ್ಲಿ ನಮ್ಮ ಪ್ರಜಾಪ್ತಭುತ್ವಕ್ಕೆ ಅಪಾಯ ಎದುರಾಗಿದೆ. ಈ ನಿಟ್ಟಿನಲ್ಲಿ ನಾವೆಲ್ಲರೂ ರಾಷ್ಟ್ರ ಧ್ವಜವನ್ನು ಕೈಯಲ್ಲಿ ಹಿಡಿದು ಪಟೇಲ್ ವೃತ್ತದ ಬ್ಲಾಕ್ ಕಾಂಗ್ರೆಸ್ ಕಚೇರಿಯ ವರೆಗೆ ಮೆರವಣಿಗೆ ನಡೆಸುತ್ತಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಎಸ್. ಪೂಜಾರ್, ಕಾರ್ಯದರ್ಶಿ ಕೀರ್ತಿ ಗಾಂವಕರ್, ಅನಿಲ ನಾಯ್ಕರ , ಶಿಲ್ಪಾ ಕೊಡೆ, ರುಕ್ಮಿಣಿ ಬಾಂಗಡೆ,ತಸವ್ವರ್ ಸೌದಾಗರ್, ಅನಿಲ್ ದಂಡಗಲ್, ರೇಣುಕಾ ಬಂದಂ,ಕರೀಂ ಆಜರೆಕರ್, ಬಶೀರ್ ಗಿರಿಯಾಲ್, ಅನಿಲ್ ನಾಯ್ಕರ್ ಹಾಗು ನಗರಸಭೆಯ ಸದಸ್ಯರು, ಮುಖಂಡರು, ಕಾರ್ಯಕರ್ತರು, ಮತ್ತು ಪಕ್ಷದ ಅಭಿಮಾನಿಗಳು ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.