ADVERTISEMENT

ದಾಂಡೇಲಿ: ₹ 1.50 ಲಕ್ಷ ಮೌಲ್ಯದ ಗಾಂಜಾ ವಶ

​ಪ್ರಜಾವಾಣಿ ವಾರ್ತೆ
Published 30 ಮೇ 2022, 17:03 IST
Last Updated 30 ಮೇ 2022, 17:03 IST
ದಾಂಡೇಲಿ ಗ್ರಾಮೀಣ ಠಾಣೆ ಪೊಲೀಸರು ಸೋಮವಾರ ಬಂಧಿಸಿದ ಆರೋಪಿಯಿಂದ ವಶ ಪಡಿಸಿಕೊಂಡಿರುವ ಗಾಂಜಾ ಮತ್ತು ಬೈಕ್
ದಾಂಡೇಲಿ ಗ್ರಾಮೀಣ ಠಾಣೆ ಪೊಲೀಸರು ಸೋಮವಾರ ಬಂಧಿಸಿದ ಆರೋಪಿಯಿಂದ ವಶ ಪಡಿಸಿಕೊಂಡಿರುವ ಗಾಂಜಾ ಮತ್ತು ಬೈಕ್   

ಕಾರವಾರ: ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಆರೋಪದ ಮೇಲೆ ದಾಂಡೇಲಿ ಗ್ರಾಮೀಣ ಠಾಣೆ ಪೊಲೀಸರು ಆರೋಪಿಯೊಬ್ಬನನ್ನು ಸೋಮವಾರ ಬಂಧಿಸಿದ್ದಾರೆ. ಆತನಿಂದ ಸುಮಾರು ₹ 1.50 ಲಕ್ಷ ಮೌಲ್ಯದ 3 ಕೆ.ಜಿ. 250 ಗ್ರಾಂ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ್ದ ಬೈಕ್ ಅನ್ನು ಜಪ್ತಿ ಮಾಡಿದ್ದಾರೆ.

ದಾಂಡೇಲಿಯ 14ನೇ ಬ್ಲಾಕ್ ಟೌನ್‌ಶಿಪ್ ನಿವಾಸಿ ಫಾರೂಖ್ (38) ಬಂಧಿತ ಆರೋಪಿ. ಬರ್ಚಿ ಕ್ರಾಸ್ ಹತ್ತಿರ ಗಾಂಜಾ ಸಾಗಿಸುತ್ತಿರುವ ಮಾಹಿತಿ ಪಡೆದ ಪೊಲೀಸರು, ಡಿ.ವೈ.ಎಸ್‌.ಪಿ ಗಣೇಶ್ ಕೆ.ಎಲ್, ಸಿ.ಪಿ.ಐ (ಪ್ರಭಾರ) ದಯಾನಂದ ಶೇಗುಣಸಿ ಹಾಗೂಪಿ.ಎಸ್.ಐ ಯಲ್ಲಾಲಿಂಗ ಕುನ್ನೂರ ನೇತೃತ್ವದ ತಂಡದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದರು.

ದಾಂಡೇಲಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.