
ದಾಂಡೇಲಿ: ನಗರದ ಸೈಂಟ್ ಮೈಕಲ್ ಕಾನ್ವೆಂಟ್ ಇಂಗ್ಲಿಷ್ ಮಾಧ್ಯಮ ಪ್ರೌಢ ಶಾಲೆಯ ಹತ್ತಿರ ಬೀದಿ ನಾಯಿ ದಾಳಿಯಿಂದ ಮೂವರು ಗಾಯಗೊಂಡ ಘಟನೆ ಶುಕ್ರವಾರ ಜರುಗಿದೆ.
ಪ್ರೌಡಶಾಲೆ 9ನೇ ತರಗತಿ ವಿದ್ಯಾರ್ಥಿನಿ ವೈಷ್ಣವಿ ನಾಗರಾಜ ಮಾಲ್ವಿ, ಸುಭಾಷ್ ನಗರದ ಹಜ್ರತ್ ಹಂಝ ಹಾಗೂ ನಿರ್ಮಲ ನಗರ ರೋಜಿ ಡಯಾಸ್ ಗಾಯಗೊಂಡುವರು. ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ನಗರದಲ್ಲಿ ಶಾಲೆ ಆವರಣ, ಪ್ರಮುಖ ರಸ್ತೆಗಳಲ್ಲಿ ಬೀದಿ ನಾಯಿ ಹಾವಳಿ ಹೆಚ್ಚಾಗಿದ್ದು, ನಿಯಂತ್ರಣಕ್ಕೆ ನಗರಾಡಳಿತ ಹಾಗೂ ತಾಲ್ಲೂಕು ಆಡಳಿತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸಾರ್ವಜನಿಕರ ಆಕ್ರೋಶ ವ್ಯಕ್ತ ಪಡಿಸಿದರು.
ಪೌರಾಯುಕ್ತ, ತಹಶೀಲ್ದಾರ್ ಭೇಟಿ: ತಹಶೀಲ್ದಾರ್ ಮತ್ತು ನಗರ ಸಭೆ ಪೌರಾಯುಕ್ತರು ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಗಾಯಗೊಂಡವರ ಆರೋಗ್ಯ ವಿಚಾರಿಸಿದರು.
ತಹಶೀಲ್ದಾರ್ ಶೈಲೇಶ್ ಪರಮಾನಂದ ಮಾತನಾಡಿ, ‘ಗಾಯಗೊಂಡ ವಿದ್ಯಾರ್ಥಿಗಳು ಆದಷ್ಟು ಬೇಗನೆ ಗುಣಮುಖರಾಗಲಿ. ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಎರಡು ವಾರಗಳಲ್ಲಿ ಕ್ರಮ ಜರುಗಿಸಲಾಗುವುದು’ ಎಂದರು. ಪೌರಾಯುಕ್ತ ವಿವೇಕ್ ಬನ್ನೆ ಮಾತನಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.