ADVERTISEMENT

ದಾಂಡೇಲಿ: ರಸ್ತೆ ಮಧ್ಯದಲ್ಲಿ ಬಸ್ ತಡೆದು, ನಂತರ ದಾರಿ ಬಿಟ್ಟ ಕಾಡಾನೆ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2026, 11:01 IST
Last Updated 25 ಫೆಬ್ರುವರಿ 2026, 11:01 IST
   

ದಾಂಡೇಲಿ: ತಾಲ್ಲೂಕಿನ ಅಂಬಿಕಾನಗರ‌-ಬೊಮ್ಮನಹಳ್ಳಿ ಮಾರ್ಗದಲ್ಲಿ ಬುಧವಾರ ಕಾಡಾನೆಯೊಂದು ರಸ್ತೆ ಮಧ್ಯೆ ನಿಂತು ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸಿತು.

ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳನ್ನು ವಿಶೇಷವಾಗಿ ಬಸ್ಸುಗಳನ್ನು, ಆನೆ ರಸ್ತೆ ಮಧ್ಯದಲ್ಲಿ ನಿಂತು ಕೆಲಕಾಲ ತಡೆದು ನಂತರ ದಾರಿ ಬಿಡುತ್ತಿರುವ ದೃಶ್ಯಗಳು ಸ್ಥಳೀಯರು ಹಾಗೂ ಪ್ರಯಾಣಿಕರಲ್ಲಿ ಅಚ್ಚರಿ ಮೂಡಿಸಿದೆ.

ಎರಡು ಬಸ್ಸುಗಳನ್ನು ಸುಮಾರು 10 ನಿಮಿಷಗಳ ಕಾಲ ರಸ್ತೆ ಮಧ್ಯೆ ನಿಲ್ಲಿಸಿ ನಂತರ ಆನೆ ಸ್ವಯಂಪ್ರೇರಿತವಾಗಿ ಅರಣ್ಯ ಪ್ರದೇಶದತ್ತ ತೆರಳಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ADVERTISEMENT

ಘಟನೆಯ ವೇಳೆ ಬಸ್ಸಿನಲ್ಲಿದ್ದ ಪ್ರಯಾಣಿಕರು ತಮ್ಮ ಮೊಬೈಲ್‌ಗಳಲ್ಲಿ ಈ ದೃಶ್ಯವನ್ನು ಸೆರೆಹಿಡಿದಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ಹರಿಬಿಟ್ಟಿದ್ದಾರೆ.

ಕಳೆದ ಕೆಲವು ದಿನಗಳಿಂದ ಇದೇ ಪ್ರದೇಶದಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿದ್ದು ವಾಹನ ಸಂಚಾರಕ್ಕೆ ಅಡ್ಡಿಪಡಿಸುತ್ತಿದೆ. ಈ ಮಾರ್ಗದಲ್ಲಿ ಕಾಡುಪ್ರಾಣಿಗಳ ಸಂಚಾರ ಸಾಮಾನ್ಯವಾಗಿದ್ದು ವಾಹನ ಸವಾರರು ಜಾಗರೂಕರಾಗಿರಬೇಕು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಎಚ್ಚರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.