
ದಾಂಡೇಲಿ ಬರ್ಚಿ ಕ್ರಾಸ್ ಹತ್ತಿರ ಕಾಡು ಪ್ರಾಣಿಗಳ ಮಾಂಸವನ್ನು ಸಾಗಿಸುತ್ತಿದ್ದ ಆರೋಪಿಯನ್ನು ಮಾಲು ಸಹಿತ ಅರಣ್ಯ ಸಂರಕ್ಷಣಾಧಿಕಾರಿ ವಶಪಡಿಸಿಕೊಂಡು ಆರೋಪಿಯನ್ನು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.
ದಾಂಡೇಲಿ: ನಗರದ ಬರ್ಚಿ ರಸ್ತೆಯಲ್ಲಿ ದ್ವಿಚಕ್ರ ವಾಹನದ ಮೂಲಕ ಅಕ್ರಮವಾಗಿ ಕಾಡುಪ್ರಾಣಿಯ ಮಾಂಸ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿ, ಮಾಲು ಸಹಿತ ದ್ವಿಚಕ್ರ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ತಂಡ ಗುರುವಾರ ವಶಪಡಿಸಿಕೊಂಡಿದ್ದಾರೆ.
ತಾಲ್ಲೂಕಿನ ಕೇರವಾಡದ ನಿವಾಸಿ ರಾಜು ಮಂಜು ಪೋತದಾರ ಎಂಬಾತ ತಮ್ಮ ದ್ವಿಚಕ್ರ ವಾಹನದಲ್ಲಿ ಕಾಡುಪ್ರಾಣಿಯ ಮಾಂಸ ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ತಂಡ ಪರಿಶೀಲಿಸಿದಾಗ ವಿಸಯ ಗೊತ್ತಾಗಿದೆ. ತಕ್ಷಣವೇ ಮಾಲು ಸಹಿತ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿ, ಪ್ರಕರಣವನ್ನು ದಾಖಲಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಶಾಂತ್ ಕುಮಾರ್ ಕೆ.ಸಿ, ಮತ್ತು ಸಹಾಯಕ ಅರಣ್ಯ, ಸಂರಕ್ಷಣಾಧಿಕಾರಿ ಸಂತೋಷ್ ಚೌವ್ಹಾಣ್ ಮಾರ್ಗದರ್ಶನದಲ್ಲಿ ವಲಯಾರಣ್ಯಾಧಿಕಾರಿ ಎನ್. ಎಲ್ ನದಾಪ್ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಉಪ ವಲಯ ಅರಣ್ಯಾಧಿಕಾರಿಗಳಾದ ಸಂದೀಪ ನಾಯ್ಕ, ಲೋಕೇಶ, ಬಸಪ್ಪ ನ್ಯಾಮಗೌಡ, ಜ್ಯೋತಿ ನಂದಿಕೋಡ ಹಾಗೂ ಗಸ್ತು ಅರಣ್ಯ ಪಾಲಕ ನಾರಾಯಣ ಜುಂಜವಾಡಕರ,ಮೋಹನ ಗೌಡ, ಸವಿತಾ ಮತ್ತು ಕ್ಷೇಮಾಭಿವೃದ್ಧಿ ನೌಕರ ಚಂದ್ರಶೇಖರ ಮಿರಾಶಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.