ADVERTISEMENT

ಚತುಷ್ಪಥ ಕಾಮಗಾರಿ ವೇಗವರ್ಧನೆಗೆ ಜಿಲ್ಲಾಧಿಕಾರಿ ಸೂಚನೆ

​ಪ್ರಜಾವಾಣಿ ವಾರ್ತೆ
Published 3 ಜುಲೈ 2019, 13:53 IST
Last Updated 3 ಜುಲೈ 2019, 13:53 IST
ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ಅವರು ಕುಮಟಾದಲ್ಲಿ ಬುಧವಾರ ಅಧಿಕಾರಿಗಳ ಸಭೆ ನಡೆಸಿದರು
ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ಅವರು ಕುಮಟಾದಲ್ಲಿ ಬುಧವಾರ ಅಧಿಕಾರಿಗಳ ಸಭೆ ನಡೆಸಿದರು   

ಕಾರವಾರ: ರಾಷ್ಟ್ರೀಯ ಹೆದ್ದಾರಿ 66ರ ಚತುಷ್ಪಥ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಗುತ್ತಿಗೆದಾರ ಸಂಸ್ಥೆ ಐಆರ್‌ಬಿಅಧಿಕಾರಿಗಳಿಗೆ ಜಿಲ್ಲಾಧಿಕಾರಿಡಾ.ಕೆ.ಹರೀಶಕುಮಾರ್ ಸೂಚಿಸಿದ್ದಾರೆ. ಅವರು ಕುಮಟಾ, ಹೊನ್ನಾವರ ಮತ್ತು ಭಟ್ಕಳ ಭಾಗದಲ್ಲಿಬುಧವಾರ ಖುದ್ದು ರಸ್ತೆ ಕಾಮಗಾರಿ ಪರಿಶೀಲಿಸಿದರು.

ಕುಮಟಾದಲ್ಲಿ ಸೀಬರ್ಡ್, ಐಆರ್‌ಬಿ ಅಧಿಕಾರಿಹಾಗೂವಿವಿಧ ಹಂತಗಳ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಭೂಸ್ವಾಧೀನ ಆಗಿದ್ದರೂ ಕಾಮಗಾರಿ ತ್ವರಿತವಾಗಿ ಆಗದಿರುವ ಬಗ್ಗೆ ತೀವ್ರ ಅಸಮಾಧಾನ ಹೊರಹಾಕಿದರು. ಕಾಮಗಾರಿ ನಡೆಯುತ್ತಿರುವ ಕಾರಣವಾಹನಸಂಚಾರದಲ್ಲಿ ಭಾರಿವ್ಯತ್ಯಯಗಳಾಗುತ್ತಿವೆ. ಅಪಘಾತಗಳೂ ಹೆಚ್ಚುತ್ತಿವೆ. ಮಳೆಗಾಲವಾದ್ದರಿಂದ ಕಾಮಗಾರಿ ಮತ್ತಷ್ಟು ವಿಳಂಬವಾಗುತ್ತಿದೆಎಂದು ಕಳವಳ ವ್ಯಕ್ತಪಡಿಸಿದರು.

‘ಮಳೆಗಾಲದಲ್ಲಿ ಸಾರ್ವಜನಿಕರ ಸಹಜ ಬದುಕಿಗೆ ಯಾವುದೇ ತೊಂದರೆ ಆಗದಂತೆ ರಸ್ತೆ ಕಾಮಗಾರಿ ನಡೆಸಬೇಕು. ಈಗಾಗಲೇ ಸೂಚಿಸಿದಂತೆ ಕಾಮಗಾರಿ ನಡೆಯುತ್ತಿರುವ ಪ್ರದೇಶದಲ್ಲಿ ಸಂಭವನೀಯ ಅವಘಡ ಸ್ಥಳಗಳನ್ನು ಗುರುತಿಸಬೇಕು. ಜೆಸಿಬಿ, ಟಿಪ್ಪರ್‌ಗಳನ್ನು ಮಳೆಗಾಲ ಮುಗಿಯುವವರೆಗೆ ನಿಯೋಜಿಸಬೇಕು’ ಎಂದು ಅವರು ಸೂಚಿಸಿದರು.

ADVERTISEMENT

‘ರಸ್ತೆ ಕಾಮಗಾರಿಗಾಗಿ ಆಸ್ತಿ ಕಳೆದುಕೊಂಡವರಿಗೆ ಈಗಾಗಲೇ ಪರಿಹಾರ ನೀಡಲಾಗಿದೆ. ಪ್ರಕರಣ ಇತ್ಯರ್ಥವಾಗಿರುವವರಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಸ್ಥಳೀಯ ಸಹಾಯಕ ಕಮಿಷನರ್ ಐಆರ್‌ಬಿಗೆಭೂಸ್ವಾಧೀನ ಮಾಡಿಕೊಡಬೇಕು’ ಎಂದೂ ತಿಳಿಸಿದರು.

ಕುಮಟಾ ಭಾಗದಲ್ಲಿ 18 ಕಡೆಗಳಲ್ಲಿ ಈಗಾಗಲೇ ಭೂಸ್ವಾಧೀನವಾಗಿದೆ.ಮುಂದಿನ ನಾಲ್ಕು ತಿಂಗಳ ಒಳಗಾಗಿ ಕಾಮಗಾರಿ ಪೂರ್ಣಗೊಳಿಸಬೇಕುಎಂದುಐಆರ್‌ಬಿಅಧಿಕಾರಿಗಳಿಗೆ ಗಡುವು ನೀಡಿದರು. ಹೊನ್ನಾವರ, ಭಟ್ಕಳ ಪ್ರದೇಶದ ಆರು ಕಡೆಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆ ಪೂರ್ಣ ಮಾಡಿ ಕೊಡಲಾಗುವುದು ಎಂದರು.

ರಸ್ತೆ ಕಾಮಗಾರಿ ಸಂಬಂಧಿಸಿದಂತೆ ಪ್ರತಿ ತಿಂಗಳೂ ಪ್ರಗತಿ ಪರಿಶೀಲನೆ ಮಾಡಲಾಗುವುದು. ಭೂಸ್ವಾಧೀನ ಇಲಾಖೆ ಅಧಿಕಾರಿಗಳು, ತಹಶೀಲ್ದಾರ್ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಕನಿಷ್ಠ ಮೂರು ತಿಂಗಳಿಗೊಮ್ಮೆ ಪ್ರಗತಿ ಪರಿಶೀಲನೆ ಮಾಡಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಕುಮಟಾಉಪವಿಭಾಗಾಧಿಕಾರಿಪ್ರೀತಿ ಗೆಹ್ಲೋಟ್, ತಹಶೀಲ್ದಾರ್ ಮೇಘರಾಜ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವ್ಯವಸ್ಥಾಪಕ ನವೀನ್ ಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.