ADVERTISEMENT

ಕಾರವಾರ: ತಲೆ ಸುತ್ತುಬಂದು ಬಳಲಿದ ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್

​ಪ್ರಜಾವಾಣಿ ವಾರ್ತೆ
Published 9 ಜನವರಿ 2020, 12:27 IST
Last Updated 9 ಜನವರಿ 2020, 12:27 IST
ಡಾ.ಕೆ.ಹರೀಶಕುಮಾರ್
ಡಾ.ಕೆ.ಹರೀಶಕುಮಾರ್   

ಕಾರವಾರ:ನಗರದ ವಾರ್ತಾ ಭವನದಲ್ಲಿ ಗುರುವಾರ ಆಯೋಜಿಸಿದ್ದ ‘ವಾರ್ತಾ ಸ್ಪಂದನ’ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ತಲೆ ಸುತ್ತುಬಂದು ಕುಳಿತಲ್ಲೇ ಕುಸಿದರು. ಒಂದೆರಡು ನಿಮಿಷಗಳ ಬಳಿಕ ಸುಧಾರಿಸಿಕೊಂಡು ಕಾರ್ಯಕ್ರಮ ಉದ್ಘಾಟಿಸಿದರು.

ವಾರ್ತಾ ಇಲಾಖೆಯ ಮೊದಲ ಫೋನ್ ಇನ್ ಕಾರ್ಯಕ್ರಮಕ್ಕೆಆರೋಗ್ಯ ಇಲಾಖೆಯ ವೈದ್ಯಾಧಿಕಾರಿಗಳನ್ನು ಕರೆಸಲಾಗಿತ್ತು. ಕಾರ್ಯಕ್ರಮ ಆರಂಭವಾಗುತ್ತಿದ್ದಂತೆಜಿಲ್ಲಾಧಿಕಾರಿ ಪ್ರಜ್ಞೆ ತಪ್ಪಿದರು. ಸ್ಥಳದಲ್ಲಿದ್ದ ವೈದ್ಯರು ಹಾಗೂ ಪತ್ರಕರ್ತರು ಕೂಡಲೇ ಅವರನ್ನು ಉಪಚರಿಸಿದರು.

ಒಂದೆರಡು ನಿಮಿಷಗಳ ಬಳಿಕ ಸುಧಾರಿಸಿಕೊಂಡು ಕಾರ್ಯಕ್ರಮ ಉದ್ಘಾಟಿಸಿ ಭಾಷಣ ಮಾಡಿದರು. ಬಳಿಕ ಮನೆಗೆ ತೆರಳಿ ಸ್ವಲ್ಪ ಹೊತ್ತು ವಿಶ್ರಾಂತಿ ಪಡೆದು ಪುನಃತಮ್ಮ ಕಚೇರಿಗೆ ಬಂದು ಕರ್ತವ್ಯ ನಿರ್ವಹಿಸಿದರು.ಇದೇವೇಳೆ ವೈದ್ಯರಿಂದ ಆರೋಗ್ಯ ತಪಾಸಣೆಯನ್ನೂ ಮಾಡಿಸಿಕೊಂಡರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.