ADVERTISEMENT

ಮದ್ಯದಂಗಡಿಗೆ ಜಿಲ್ಲಾಧಿಕಾರಿ ಭೇಟಿ: ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2019, 17:24 IST
Last Updated 11 ಏಪ್ರಿಲ್ 2019, 17:24 IST

ಕಾರವಾರ:ಚುನಾವಣಾ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಡಾ.ಕೆ.ಹರೀಶ ಕುಮಾರ್ ಗೋವಾ, ಕಾರವಾರದ ಮದ್ಯದಂಗಡಿಗಳು, ಬಾರ್ ಮತ್ತು ರೆಸ್ಟೋರೆಂಟ್‌ಗಳಿಗೆ ಗುರುವಾರ ಭೇಟಿ ನೀಡಿ ಪರಿಶೀಲಿಸಿದರು.

ಗೋವಾ ಅಧಿಕಾರಿಗಳೊಂದಿಗೆ ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೌಹಾರ್ದ ಸಭೆ ನಡೆಸಿದ ಬೆನ್ನಲ್ಲೇ ಜಿಲ್ಲಾಧಿಕಾರಿ ಪರಿಶೀಲನೆ ನಡೆಸಿದರು.ಗೋವಾದಲ್ಲಿ ಅಕ್ರಮ ಮದ್ಯದಂಗಡಿಗಳನ್ನು ಮುಚ್ಚಿಸಿ ಕ್ರಮ ಕೈಗೊಳ್ಳುವಂತೆ ಅಲ್ಲಿನ ಅಧಿಕಾರಿಗಳಿಗೆ ಅವರು ಸೂಚಿಸಿದರು. ಅನುಮತಿ ಇರುವ ಮದ್ಯದಂಗಡಿಗಳಲ್ಲಿಚುನಾವಣೆ ಮುಗಿಯುವವರೆಗೆ ಮದ್ಯ ಮಾರಾಟ ನಿಯಂತ್ರಣದಲ್ಲಿ ಇರಬೇಕು. ಗ್ರಾಹಕರಿಗೆ ಅಗತ್ಯಕ್ಕಿಂತ ಹೆಚ್ಚಿನ ಮಾರಾಟ ಮಾಡಬಾರರು ಎಂದುತಾಕೀತು ಮಾಡಿದರು.

ಕಾರವಾರದ ಪ್ರಮುಖ ಬಾರ್ ಆ್ಯಂಡ್ ರೆಸ್ಟೋರೆಂಟ್‌ಗಳಿಗೂದಿಢೀರ್ ಭೇಟಿ ನೀಡಿದರು. ಅಬಕಾರಿ ನಿಯಮದಂತೆ ಮದ್ಯದ ದಾಸ್ತಾನು ಇದೆಯೇ ಹಾಗೂ ನಿಯಮಗಳನ್ನು ಪಾಲಿಸಲಾಗುತ್ತಿದೆಯೇ ಎಂದು ದಾಖಲೆಗಳನ್ನು ಪರಿಶೀಲಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.