ADVERTISEMENT

ಕಾರವಾರ: ಬಸ್ ಚಾಲಕರಿಗೆ ಹೂ ಮಳೆಗರೆದು ಗೌರವ

​ಪ್ರಜಾವಾಣಿ ವಾರ್ತೆ
Published 8 ಮೇ 2020, 15:20 IST
Last Updated 8 ಮೇ 2020, 15:20 IST
ಜಿಲ್ಲೆಯಿಂದ ವಲಸೆ ಕಾರ್ಮಿಕರನ್ನು ಅವರ ಜಿಲ್ಲೆಗಳಿಗೆ ಕರೆದುಕೊಂಡು ಹೋದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಚಾಲಕರನ್ನು ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ಕಾರವಾರದಲ್ಲಿ ಶುಕ್ರವಾರ ಹೂ ಮಳೆಗರೆದು ಗೌರವಿಸಿದರು
ಜಿಲ್ಲೆಯಿಂದ ವಲಸೆ ಕಾರ್ಮಿಕರನ್ನು ಅವರ ಜಿಲ್ಲೆಗಳಿಗೆ ಕರೆದುಕೊಂಡು ಹೋದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಚಾಲಕರನ್ನು ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ಕಾರವಾರದಲ್ಲಿ ಶುಕ್ರವಾರ ಹೂ ಮಳೆಗರೆದು ಗೌರವಿಸಿದರು   

ಕಾರವಾರ: ಜಿಲ್ಲೆಯ ವಿವಿಧ ಭಾಗಗಳಲ್ಲಿದ್ದ ಇತರ ಜಿಲ್ಲೆಗಳ ವಲಸೆ ಕಾರ್ಮಿಕರನ್ನು ಅವರ ಜಿಲ್ಲೆಗಳಿಗೆ ತಲುಪಿಸಿದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಚಾಲಕರಿಗೆಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ಶುಕ್ರವಾರ ಹೂಮಳೆಗರೆದು ಅಭಿನಂದಿಸಿದರು.

ಕೊರೊನಾ ಸೋಂಕು ಹರಡುವ ಭೀತಿಯ ಮಧ್ಯೆಯೂ ಬಸ್ ಚಾಲಕರು ತಮ್ಮ ಕರ್ತವ್ಯಪ್ರಜ್ಞೆಯನ್ನು ಮೆರೆದಿದ್ದರು. 240ಕ್ಕೂ ಅಧಿಕ ಕಾರ್ಮಿಕರನ್ನು ಅವರ ಊರು ತಲುಪಲು ಸಹಕರಿಸಿದ್ದರು. ಕಾರವಾರ ಮತ್ತು ಅಂಕೋಲಾ ಬಸ್ ಡಿಪೊಗಳ 14 ಚಾಲಕರು ರಾಜ್ಯದ ವಿವಿಧ ಭಾಗಗಳಿಗೆ ಬಸ್ ಚಾಲನೆ ಮಾಡಿದ್ದರು.ಈ ಕಾರ್ಯಕ್ಕಾಗಿ ಕಾರವಾರ ಬಸ್ ನಿಲ್ದಾಣದಲ್ಲಿ ಜಿಲ್ಲಾಧಿಕಾರಿ ಧನ್ಯವಾದ ಸಲ್ಲಿಸಿದರು.

ನಿಗಮದ ಸಿಬ್ಬಂದಿಯ ಆರೋಗ್ಯದ ಮೇಲೆ ನಿಗಾ ಇಡಲಾಗುತ್ತದೆ ಎಂದು ಇದೇ ವೇಳೆ ಅಧಿಕಾರಿಗಳು ತಿಳಿಸಿದರು. ಈ ಸಂದರ್ಭದಲ್ಲಿ ಕಾರವಾರ ಡಿಪೊ ವ್ಯವಸ್ಥಾಪಕ ರವೀಂದ್ರ ಪಾತ್ರಪೇಕರ್ ಹಾಗೂ ಅಂಕೋಲಾ ಡಿಪೊ ವ್ಯವಸ್ಥಾಪಕ ಯುಗ ಬಾನಾವಳಿಕರ್ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.