ADVERTISEMENT

ಪೌರಕಾರ್ಮಿಕರ ಮೇಲೆ ಹಲ್ಲೆ ನಡೆಸಿದರೆ ಕಠಿಣ ಶಿಕ್ಷೆ: ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2023, 14:57 IST
Last Updated 21 ಸೆಪ್ಟೆಂಬರ್ 2023, 14:57 IST

ಕಾರವಾರ: ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುವ ಪೌರ ಕಾರ್ಮಿಕರ ಮೇಲೆ ಹಲ್ಲೆ ನಡೆಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಹೇಳಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಪಾಯಿ ಕರ್ಮಚಾರಿಗಳ ಜಿಲ್ಲಾಮಟ್ಟದ ಜಾಗೃತಿ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಪೌರ ಕಾರ್ಮಿಕರ ಮೇಲೆ ಹಲ್ಲೆ ನಡೆಸುವವರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪಂಗಡ ಪ್ರತಿಬಂಧಕ ಕಾಯ್ದೆಯ ಅಡಿ ಅತ್ಯಂತ ಕಠಿಣ ಶಿಕ್ಷೆಗೆ ಒಳಪಡಿಸುವ ಕುರಿತಂತೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ADVERTISEMENT

ಪೌರ ಕಾರ್ಮಿಕರಿಗೆ ಸುರಕ್ಷತಾ ಪರಿಕರಗಳಾದ ಗಮ್ ಬೂಟ್, ಸ್ಯಾನಿಟೈಸರ್, ಗ್ಲೌಸ್, ಮಾಸ್ಕ್, ಸಮವಸ್ತ್ರಗಳನ್ನು ಕಡ್ಡಾಯವಾಗಿ ಒದಗಿಸಬೇಕು ಎಂದರು.

ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಸ್ಟೆಲಾ ವರ್ಗಿಸ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಅಜ್ಜಪ್ಪ ಸೊಗಲದ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.