ADVERTISEMENT

ಶವ ಸಂಸ್ಕಾರಕ್ಕೆ ಅಡ್ಡಿ ಪಡಿಸಿದರೆ ‍ಪ್ರಕರಣ: ಉತ್ತರ ಕನ್ನಡ ಜಿಲ್ಲಾಧಿಕಾರಿ

ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

​ಪ್ರಜಾವಾಣಿ ವಾರ್ತೆ
Published 8 ಜುಲೈ 2020, 13:30 IST
Last Updated 8 ಜುಲೈ 2020, 13:30 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕಾರವಾರ: ‘ಸರ್ಕಾರದ ನಿಯಮಾವಳಿಯಂತೆ ಶವ ಸಂಸ್ಕಾರಮಾಡುವುದಕ್ಕೆ ಅಡ್ಡಿ ಪಡಿಸುವವರ ವಿರುದ್ಧ ಪ್ರಕರಣ ದಾಖಲಿಸಬೇಕು.ಯಾವುದೇ ವ್ಯಕ್ತಿ ಮೃತಪಟ್ಟಾಗ ನಿಯಮಗಳಿಗೆ ಅನುಸಾರವಾಗಿ ಶವ ಸಂಸ್ಕಾರವನ್ನು ಕೈಗೊಳ್ಳುವ ಅಧಿಕಾರ ಸ್ಥಳೀಯ ಸಂಸ್ಥೆ ಮತ್ತು ಅಧಿಕಾರಿಗಳಿಗಿದೆ’ ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ನಿರ್ದೇಶನ ನೀಡಿದ್ದಾರೆ.

ನಗರದಲ್ಲಿ ಬುಧವಾರ ಎಲ್ಲ ಉಪವಿಭಾಗಾಧಿಕಾರಿಗಳು, ತಹಶೀಲ್ದಾರರು, ತಾಲ್ಲೂಕು ಪಂಚಾಯ್ತಿ ಕಾರ್ಯ ನಿರ್ವಹಣಾಧಿಕಾರಿಗಳುಹಾಗೂ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳ ಜೊತೆ ವಿಡಿಯೊಸಂವಾದ ನಡೆಸಿ ಅವರು ಮಾತನಾಡಿದರು.

‘ಇನ್ನುಮುಂದೆ ಜಿಲ್ಲೆಗೆ ಹೊರಗಿನಿಂದ ಬಂದ ಎಲ್ಲರಿಗೂ ಹೋಂ ಕ್ವಾರಂಟೈನ್ ಕಡ್ಡಾಯವಾಗಿದೆ.ಇದನ್ನು ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಸೂಚಿಸಿದರು.

ADVERTISEMENT

‘ಎಲ್ಲ ತಾಲ್ಲೂಕುಗಳಲ್ಲಿ ಕೋವಿಡ್ –19ಗೆ ಚಿಕಿತ್ಸೆ ನೀಡಲು ವ್ಯವಸ್ಥೆಯಿದೆ. ಸೋಂಕಿತರಿಗೆ ಕೋವಿಡ್ಮತ್ತು ಇತರ ಕಾಯಿಲೆಗಳಿದ್ದಲ್ಲಿ ಅವುಗಳಿಗೂ ಚಿಕಿತ್ಸೆನೀಡಬೇಕು. ಎಲ್ಲ ರೋಗಿಗಳನ್ನು ಕಾರವಾರದ ವೈದ್ಯಕೀಯ ಸಂಸ್ಥೆಯ ಕೋವಿಡ್ ವಾರ್ಡ್‌ಗೆಕಳುಹಿಸಿ ಕೊಟ್ಟರೆವಿಳಂಬವಾಗಿ ಸಮಸ್ಯೆಯಾಗುವ ಸಾಧ್ಯತೆಯಿದೆ’ ಎಂದುಹೇಳಿದರು.

‘ಎಲ್ಲ ಅಧಿಕಾರಿಗಳೂ ತಂಡವಾಗಿ ಕಾರ್ಯ ನಿರ್ವಹಿಸಿದರೆ ಯಾವುದೇ ಸಮಸ್ಯೆ ಅಥವಾ ಸಾವು ಸಂಭವಿಸುವುದಿಲ್ಲ. ಪ್ರತಿ ರೋಗಿಯ ಬಗ್ಗೆ ಲಕ್ಷ್ಯವಹಿಸಿ ಚಿಕಿತ್ಸೆ ಕೊಡಿಸಬೇಕು. ಇದರಲ್ಲಿ ವಿಫಲವಾದಲ್ಲಿ ಉಪ ವಿಭಾಗಾಧಿಕಾರಿಗಳು ಮತ್ತು ತಹಶೀಲ್ದಾರರು ನೇರ ಹೊಣೆಗಾರರಾಗುತ್ತಾರೆ’ ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು ಮಾತನಾಡಿ, ‘ಸೋಂಕಿತರ ಸಂಪರ್ಕದ ಮಾಹಿತಿ ಮತ್ತು ಕ್ವಾರಂಟೈನ್ ಬಗ್ಗೆ ಸೂಕ್ತವಾಗಿ ನಿಗಾ ವಹಿಸಬೇಕು. ಕಂಟೈನ್‍ಮೆಂಟ್ ವಲಯಗಳ ನಿರ್ವಹಣೆ ಅತಿಮುಖ್ಯವಾಗಿದೆ’ ಎಂದು ಹೇಳಿದರು.

ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ನಾಗರಾಜ್ ಸಿಂಗ್ರೇರ್, ಉಪ ವಿಭಾಗಾಧಿಕಾರಿ ಎಂ.ಪ್ರಿಯಾಂಗಾ, ಜಿಲ್ಲಾ ಸರ್ವೇಕ್ಷಣಾಧಿಕಾರಿ ವಿನೋದ ಭೂತೆ, ತಹಶೀಲ್ದಾರ್ ಆರ್.ವಿ.ಕಟ್ಟಿ, ತಾಲ್ಲೂಕು ವೈದ್ಯಾಧಿಕಾರಿ ಸೂರಜಾನಾಯ್ಕಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.