ADVERTISEMENT

ಬನವಾಸಿ: ಬೀದಿ ಕಸ ಗುಡಿಸಿದ ಜಿಲ್ಲಾಧಿಕಾರಿ

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2023, 21:26 IST
Last Updated 11 ಅಕ್ಟೋಬರ್ 2023, 21:26 IST
ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಅವರು ಶಿರಸಿ ತಾಲ್ಲೂಕಿನ ಬನವಾಸಿಯಲ್ಲಿ ಬುಧವಾರ ನಸುಕಿನ ಜಾವ ಕಸ ಗುಡಿಸಿದರು
ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಅವರು ಶಿರಸಿ ತಾಲ್ಲೂಕಿನ ಬನವಾಸಿಯಲ್ಲಿ ಬುಧವಾರ ನಸುಕಿನ ಜಾವ ಕಸ ಗುಡಿಸಿದರು   

ಕಾರವಾರ: ‘ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಪ್ರತಿ ಫಲಾನುಭವಿಗಳಿಗೆ ಕಡ್ಡಾಯವಾಗಿ ತಲುಪುವಂತೆ ಎಚ್ಚರಿಕೆ ವಹಿಸಬೇಕು. ಅರ್ಹರು ಸೌಲಭ್ಯ ವಂಚಿತರಾಗದಂತೆ ನೋಡಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಹೇಳಿದರು.

ಶಿರಸಿ ತಾಲ್ಲೂಕಿನ ಬನವಾಸಿಯ ಪರಿಶಿಷ್ಟ ಕಾಲೊನಿಗಳಲ್ಲಿ ಬುಧವಾರ ಸಂಚರಿಸಿದ ಅವರು ಜನರೊಂದಿಗೆ ಸರ್ಕಾರದ ಸೌಲಭ್ಯಗಳ ಕುರಿತು ಚರ್ಚಿಸಿದರು. ಈ ವೇಳೆ ಅಧಿಕಾರಿಗಳಿಗೆ ಸೂಚನೆ ನೀಡಿದ ಜಿಲ್ಲಾಧಿಕಾರಿ ಸರ್ಕಾರದ ಸೌಲಭ್ಯಗಳು ಅರ್ಹರನ್ನು ತಲುಪುವಂತೆ ನೋಡಿಕೊಳ್ಳಬೇಕು ಎಂದರು.

ಜನತಾ ದರ್ಶನ ಕಾರ್ಯಕ್ರಮದ ಅಂಗವಾಗಿ ಮಂಗಳವಾರ ಬನವಾಸಿಯಲ್ಲಿ ತಂಗಿದ್ದ ಅವರು ರಾತ್ರಿ ಸ್ಥಳೀಯ ಅಂಬೇಡ್ಕರ್ ವಸತಿ ಶಾಲೆಯಲ್ಲಿ ವಾಸ್ತವ್ಯ ಹೂಡಿದರು. ವಿದ್ಯಾರ್ಥಿಗಳ ಕುಂದು ಕೊರತೆಗಳನ್ನು ಆಲಿಸಿದ್ದರು. ಬುಧವಾರ ನಸುಕಿನ ಜಾವ ಬನವಾಸಿಯ ಮುಖ್ಯ ಬೀದಿಯಲ್ಲಿ ಸ್ವಚ್ಛತಾ ಶ್ರಮದಾನವನ್ನೂ ನಡೆಸಿದರು.

ADVERTISEMENT

ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶಗೋಪು ರಜಪೂತ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಅಜ್ಜಪ್ಪ ಸೊಗಲದ, ಶಿರಸಿ ಉಪವಿಭಾಗಾಧಿಕಾರಿ ಆರ್.ದೇವರಾಜ್, ತಹಶೀಲ್ದಾರ್ ಶ್ರೀಧರ ಮುಂದಲಮನಿ, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.