ADVERTISEMENT

ಮೇದಿನಿ: ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ 19ರಂದು

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2022, 15:52 IST
Last Updated 16 ಮಾರ್ಚ್ 2022, 15:52 IST
ಮುಲ್ಲೈ ಮುಗಿಲನ್
ಮುಲ್ಲೈ ಮುಗಿಲನ್   

ಕಾರವಾರ: ಕುಮಟಾ ತಾಲ್ಲೂಕಿನ ಮೇದಿನಿ ಗ್ರಾಮಕ್ಕೆ ಮಾರ್ಚ್ 19ರಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ ನೀಡಲಿದ್ದಾರೆ. ಅಲ್ಲಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ’ ಕಾರ್ಯಕ್ರಮದ ಮೂಲಕ ಗ್ರಾಮಸ್ಥರ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.

ಜಿಲ್ಲೆಯ ಎಲ್ಲ ಉಪ ವಿಭಾಗಾಧಿಕಾರಿಗಳು ಮತ್ತು ತಹಸೀಲ್ದಾರರು ವಿವಿಧ ಹಳ್ಳಿಗಳಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಯಲ್ಲಾಪುರ ತಾಲ್ಲೂಕಿನ ಕನ್ನಡಗಲ್ ಗ್ರಾಮದ ಮಾವಳ್ಳಿ ದೇವಸ್ಥಾನದಲ್ಲಿ ಉಪ ವಿಭಾಗಾಧಿಕಾರಿ ದೇವರಾಜ್.ಆರ್ ಹಾಗೂ ತಹಸೀಲ್ದಾರ್ ಕೃಷ್ಣ ಕಾಮ್ಕರ್, ಕಾರವಾರ ತಾಲ್ಲೂಕಿನ ಮಚ್ಚಳ್ಳಿಯ ಸಿದ್ದರಾಮೇಶ್ವರ ದೇವಸ್ಥಾನದಲ್ಲಿ ಉಪ ವಿಭಾಗಾಧಿಕಾರಿ ಜಯಲಕ್ಷ್ಮಿ ರಾಯಕೊಡ ಹಾಗೂ ತಹಸೀಲ್ದಾರ್ ಎನ್.ಎಫ್. ನೋರೊನಾ ಅಹವಾಲು ಸ್ವೀಕರಿಸಲಿದ್ದಾರೆ.

ಭಟ್ಕಳ ತಾಲ್ಲೂಕಿನ ಮಾರುಕೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಹಶೀಲ್ದಾರ್ ಎಸ್.ರವಿಚಂದ್ರನ್, ಶಿರಸಿ ತಾಲ್ಲೂಕಿನ ಇಟಗುಳಿ ಗ್ರಾಮದ ಸಭಾಭವನದಲ್ಲಿ ತಹಶೀಲ್ದಾರ್ ಎಂ.ಆರ್. ಕುಲಕರ್ಣಿ, ಅಂಕೋಲಾ ತಾಲ್ಲೂಕಿನ ಹಳವಳ್ಳಿ (ಮಳಲಗಾಂವ) ಗ್ರಾಮದಲ್ಲಿ ತಹಶೀಲ್ದಾರ್ ಉದಯ ಕುಂಬಾರ, ಹೊನ್ನಾವರ ತಾಲ್ಲೂಕಿನ ಬಾಳೆಮೆಟ್ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ತಹಶೀಲ್ದಾರ್ ನಾಗರಾಜ್ ನಾಯ್ಕ ಹಾಗೂ ಭಟ್ಕಳಉಪ ವಿಭಾಗಾಧಿಕಾರಿ ಮಮತಾದೇವಿ ಜಿ.ಎಸ್ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.

ADVERTISEMENT

ಸಿದ್ದಾಪುರ ತಾಲ್ಲೂಕಿನ ಇಳಿಮನೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ತಹಶೀಲ್ದಾರ್ ಸಂತೋಷ ಭಂಡಾರಿ, ಮುಂಡಗೋಡ ತಾಲ್ಲೂಕಿನ ಬಾಳೇಕೊಪ್ಪ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ತಹಶೀಲ್ದಾರ್ ಶ್ರೀಧರ ಮುಂದಲಮನಿ, ಹಳಿಯಾಳ ತಾಲ್ಲೂಕಿನ ಹೋಮನಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ತಹಶೀಲ್ದಾರ್ ಪ್ರಕಾಶ ಗಾಯಕವಾಡ, ದಾಂಡೇಲಿ ತಾಲ್ಲೂಕಿನ ವಿಟ್ನಾಳ ಗ್ರಾಮದ ಕೃಷ್ಣ ದೇವಸ್ಥಾನದಲ್ಲಿ ತಹಶೀಲ್ದಾರ್ ಶೈಲೇಶ ಎಸ್. ಪರಮಾನಂದ, ಜೊಯಿಡಾ ತಾಲ್ಲೂಕಿನ ಡಿಗ್ಗಿ ಗ್ರಾಮದ ಸರ್ಕಾರಿ ಹಿರಿಯ ಶಾಲೆಯಲ್ಲಿ ತಹಶೀಲ್ದಾರ್ ಸಂಜಯ ಎಂ.ಕಾಂಬಳೆ ಅಹವಾಲು ಸ್ವೀಕರಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.