ADVERTISEMENT

‘ನಾರಾಯಣಗುರು ನಗರ; ಮತದಾನ ಬಹಿಷ್ಕಾರಕ್ಕೆ ನಿರ್ಧಾರ’

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2020, 2:38 IST
Last Updated 24 ಅಕ್ಟೋಬರ್ 2020, 2:38 IST

ಶಿರಸಿ: ಡಿಫಾರೆಸ್ಟ್ ಸಮಸ್ಯೆ ಬಗೆಹರಿಯದ ಕಾರಣ ಪಶ್ಚಿಮ ಪದವೀಧರ ಕ್ಷೇತ್ರ ಹಾಗೂ ಮುಂಬರುವ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಮತದಾನದಿಂದ ದೂರ ಉಳಿಯಲು ನಿರ್ಧರಿಸಲಾಗಿದೆ ಎಂದು ನಾರಾಯಣಗುರು ನಗರ ಹಿತರಕ್ಷಣಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಉಮೇಶ ಬಂಕಾಪುರ ತಿಳಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮೈಸೂರು ಸರ್ಕಾರ ಇದ್ದ ಕಾಲದಲ್ಲೇ ನಾರಾಯಣಗುರು ನಗರ ನಿವಾಸಿಗಳಿಗೆ ಭೂಮಿ ಹಕ್ಕು ಮಂಜೂರು ಮಾಡಲಾಗಿತ್ತು. ಆದರೆ ಡಿಫಾರೆಸ್ಟ್ ಮಾಡದ ಕಾರಣ ಭೂಮಿ ಹಕ್ಕಿನಿಂದ ಜನರು ವಂಚಿತರಾಗಿದ್ದೇವೆ. ಈ ಸಮಸ್ಯೆ ಬಗೆಹರಲು ಮಾಡಿದ ಮನವಿಗೆ ಈವರೆಗೂ ಜನಪ್ರತಿನಿಧಿಗಳಿಂದ ಸ್ಪಂದನೆ ಸಿಕ್ಕಿಲ್ಲ’ ಎಂದು ಆರೋಪಿಸಿದರು.

‘ಅ.18 ರಂದು ಸಭೆ ನಡೆಸಿದ್ದೇವೆ. ಪದವೀಧರ ಕ್ಷೇತ್ರದ ಚುನಾವಣೆಗೆ ಮತದಾನದ ಹಕ್ಕು ಹೊಂದಿರುವ ಇಲ್ಲಿನ 190 ಮತದಾರರು ಮತದಾನದಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ. ಇಲ್ಲಿರುವ 497 ಮನೆಗಳ ಮತದಾರರು ಮುಂದಿನ ಚುನಾವಣೆಗಳಲ್ಲಿ ಮತದಾನ ನಡೆಸದಿರಲು ನಿರ್ಣಯಿಸಿದ್ದೇವೆ’ ಎಂದು ತಿಳಿಸಿದರು.

ADVERTISEMENT

ಸಮಿತಿಯ ಅಧ್ಯಕ್ಷ ಗೌರೀಶ ನಾಯ್ಕ, ಸದಸ್ಯ ಜೀವನ ಪೈ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.