ಭಟ್ಕಳ: ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಅವರನ್ನು ಉದ್ದೇಶಿಸಿ ಫೇಸ್‌ಬುಕ್ ಖಾತೆಯಲ್ಲಿ ಉದ್ದೇಶಪೂರ್ವಕವಾಗಿ ಅವಮಾನಕಾರಿ ಪೋಸ್ಟ್ ಹಾಕಿದ ವ್ಯಕ್ತಿಯೊಬ್ಬನ ವಿರುದ್ದ ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಲ್ಲಾಸ ಶೆಣೈ ಎಂಬ ವ್ಯಕ್ತಿಯು ತನ್ನ ಫೇಸ್‌ಬುಕ್ ಖಾತೆಯಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ. ಇದರಿಂದ ಪಕ್ಷದ ಕಾರ್ಯಕರ್ತರಲ್ಲಿ ಅಸಮಾಧಾನ ಉಂಟಾಗಿತ್ತು. ಸಾರ್ವಜನಿಕ ನೆಮ್ಮದಿ ಹಾಳು ಮಾಡುವ, ಸಚಿವರಿಗೆ ಬೆದರಿಕೆ ಹಾಕಿದವನ ಮೇಲೆ ಕಾನೂನು ಕ್ರಮವಹಿಸುವಂತೆ ಮಹೇಶ ಚಂದ್ರಪ್ಪ ಸಮನಳ್ಳಿ ಎನ್ನುವವರು ಮುರ್ಡೇಶ್ವರ ಪೊಲೀಸ್ ಠಾಣೆಗೆ ಿ ದೂರು ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.