ADVERTISEMENT

ಹಣಕಾಸು ಸಚಿವರನ್ನು ಭೇಟಿ ಮಾಡಿದ ದೇಶಪಾಂಡೆ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2019, 12:59 IST
Last Updated 5 ಅಕ್ಟೋಬರ್ 2019, 12:59 IST
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಶಾಸಕ ಆರ್.ವಿ.ದೇಶಪಾಂಡೆ ಭೇಟಿ ಮಾಡಿದರು
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಶಾಸಕ ಆರ್.ವಿ.ದೇಶಪಾಂಡೆ ಭೇಟಿ ಮಾಡಿದರು   

ಶಿರಸಿ: ಹಳಿಯಾಳ ಕ್ಷೇತ್ರದ ಶಾಸಕ ಆರ್.ವಿ.ದೇಶಪಾಂಡೆ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಶನಿವಾರ ಬೆಂಗಳೂರಿನಲ್ಲಿ ಭೇಟಿ ಮಾಡಿ, ಮಧ್ಯಮ, ಸಣ್ಣ ಮತ್ತು ಸೂಕ್ಷ್ಮ ಕೈಗಾರಿಕೆಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಗಮನಕ್ಕೆ ತಂದರು.

ನಿರ್ಮಲಾ ಅವರು ಈ ಹಿಂದೆ ಕೈಗಾರಿಕಾ ಸಚಿವರಾಗಿ ಅನುಭವ ಇರುವ ದೇಶಪಾಂಡೆ ಅವರ ಬಳಿ ಅನೇಕ ವಿಷಯಗಳನ್ನು ಚರ್ಚಿಸಿ, ಉಪಯುಕ್ತ ಮಾಹಿತಿ ಪಡೆದರು.

ಸಚಿವರು ಎಲ್ಲ ಸಮಸ್ಯೆಗಳಿಗೆ ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದರು ಎಂದು ಶಾಸಕರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.