
ಯಲ್ಲಾಪುರ: ವಿವಿಧ ಇಲಾಖೆಗಳ ಮುಖ್ಯಸ್ಥರು ತಮ್ಮ ಇಲಾಖೆಯಲ್ಲಿ ಆಗಬೇಕಾದ ಕಾಮಗಾರಿಗಳ ಕುರಿತು ಸ್ಥಳೀಯ ಆಡಳಿತಕ್ಕೆ ಬೇಡಿಕೆಯ ಪ್ರಸ್ತಾವ ಸಲ್ಲಿಸುವಂತೆ ತಾಲ್ಲೂಕು ಯೋಜನಾಧಿಕಾರಿ ರಾಘವ ಅಧಿಕಾರಿಗಳಿಗೆ ಸೂಚಿಸಿದರು.
ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ಶುಕ್ರವಾರ ನಡೆದ ಸಾಮಾನ್ಯ ಸಭೆ ಮತ್ತು ಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದರು.
ತಾಲ್ಲೂಕು ಪಂಚಾಯಿತಿ ಇಒ ರಾಜೇಶ ಧನವಾಡಕರ ಮಾತನಾಡಿ, ಪಧವೀಧರರ ಚುನಾವಣೆಯ ಹಿನ್ನೆಲೆಯಲ್ಲಿ ಮತದಾರರ ನೋಂದಣಿ ನಡೆದಿದ್ದು ಎಲ್ಲ ಅರ್ಹ ಮತದಾರರು ನೋಂದಣಿ ಮಾಡಿಕೊಳ್ಳಬೇಕು’ ಎಂದರು.
ತಾಲ್ಲೂಕು ಆರೋಗ್ಯಾಧಿಕಾರಿ ನರೇಂದ್ರ ಪವಾರ ಮಾತನಾಡಿ, ‘ತಾಲ್ಲೂಕಿನಲ್ಲಿ ಎರಡು ಇಲಿ ಜ್ವರ ಪ್ರಕರಣಗಳು ವರದಿಯಾಗಿದ್ದು ಈ ಕುರಿತು ಜಾಗೃತಿ ನೀಡಲಾಗುತ್ತಿದೆ’ ಎಂದು ತಿಳಿಸಿದರು.
ಬಿಇಒ ರೇಖಾ ನಾಯಕ ಮಾತನಾಡಿ, ‘ಶಾಲಾ ಮಕ್ಕಳಿಗೆ ಎರಡು ಜೊತೆ ಸಮವಸ್ತ್ರ ಈಗಾಗಲೇ ಪೂರೈಸಲಾಗಿದೆ. ಆದರೆ ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಅಗತ್ಯ ಶೂ ಪೂರೈಕೆ ಆಗಿಲ್ಲ. ಅನೇಕ ಕಡೆ ಅತಿಥಿ ಶಿಕ್ಷಕರ ಬೇಡಿಕೆ ಇದೆ’ ಎಂದರು.
ತೋಟಗಾರಿಕಾ ಅಧಿಕಾರಿ ಸತೀಶ ಹೆಗಡೆ ಮಾತನಾಡಿ,ʻಅಡಿಕೆ ಬೆಳೆಗೆ ಎಲೆಚುಕ್ಕಿ ರೋಗ ಕಂಡುಬರುತ್ತಿದೆ. ಹೊಸದಾಗಿ ಗದ್ದೆಯನ್ನು ತೋಟವನ್ನಾಗಿ ಪರಿವರ್ತಿಸುವವರು ತಾಳೆ ಬೆಳೆ ಬೆಳೆದಲ್ಲಿ ಸಹಾಯಧನ ದೊರೆಯುತ್ತದೆ’ ಎಂದು ತಿಳಿಸಿದರು.
ಸಿಡಿಪಿಒ ಶ್ರೀದೇವಿ ಪಾಟೀಲ ಮಾತನಾಡಿ, ‘ತಾಲ್ಲೂಕಿನಲ್ಲಿ ಒಟ್ಟು 3 ಅಂಗನವಾಡಿಗಳು ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿವೆ’ ಎಂದರು.
ಸಹಾಯಕ ಕೃಷಿ ನಿರ್ದೇಶಕ ನಾಗರಾಜ ನಾಯ್ಕ ಮಾತನಾಡಿ, ʻಅಸಮಪ೯ಕ ಮಳೆಯಿಂದಾಗಿ ಈ ಸಲ ಮುಸುಕಿನ ಜೋಳಕ್ಕೆ ಹಾನಿಯಾಗಿದೆ. ಇಳುವರಿ ಕಡಿಮೆ ಆಗಲಿದೆ. ಕಿರವತ್ತಿ, ಮದನೂರು ಭಾಗದಲ್ಲಿ ಬೆಳೆಗೆ ಆನೆ, ಹಂದಿ ಮೊದಲಾದ ಕಾಡು ಪ್ರಾಣಿಗಳ ಹಾವಳಿ ಇದೆʼ ಎಂದು ಹೇಳಿದರು.
ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ದಾಕ್ಷಾಯಣಿ ನಾಯಕ ಮಾತನಾಡಿ, ‘ಹಾಸ್ಟೇಲ್ ಪ್ರವೇಶ ಕೋರಿ ಹೆಚ್ಚಿನ ಅರ್ಜಿ ಬಂದಿದೆ. ಆದರೆ ಬೇಡಿಕೆ ತಕ್ಕಷ್ಟು ಸ್ಥಳಾವಕಾಶ ಇಲ್ಲ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.