ಶಿರಸಿ: ಸ್ವರ್ಣವಲ್ಲಿ ಮಹಾ ಸಂಸ್ಥಾನವು ನೂತನ ಉತ್ತರಾಧಿಕಾರಿ ಮತ್ತು ಶಿಷ್ಯ ಸ್ವೀಕಾರ ಮಹೋತ್ಸವದ ಸಂಭ್ರಮಕ್ಕೆ ಗುರುವಾರ ಸಾಕ್ಷಿಯಾಗಲಿದೆ.
ಯಲ್ಲಾಪುರ ತಾಲ್ಲೂಕಿನ ಗಂಗೆಮನೆಯ ನಾಗರಾಜ ಭಟ್ ಅವರು ಸ್ವರ್ಣವಲ್ಲಿ ಸಂಸ್ಥಾನದ ನೂತನ ಶಿಷ್ಯರಾಗಿದ್ದಾರೆ. ಶಿಷ್ಯ ಸ್ವೀಕಾರಕ್ಕೆ ಪೂರಕವಾಗಿ ಫೆಬ್ರುವರಿ 18ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದಿವೆ.
ಶಿಷ್ಯ ಸ್ವೀಕಾರದ ನಂತರ ನಡೆಯುವ ಧರ್ಮಸಭೆಯಲ್ಲಿ ಯೋಗವಾಸಿಷ್ಠ ಪ್ರಥಮ ಸಂಪುಟ ಲೋಕಾರ್ಪಣೆ ಆಗಲಿದೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಭಾಗವಹಿಸುವರು. ಸ್ವರ್ಣವಲ್ಲಿ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿವೆ. 35 ಸಾವಿರಕ್ಕೂ ಹೆಚ್ಚು ಭಕ್ತರು ಪಾಲ್ಗೊಳ್ಳಬಹುದು.
ಮೈಸೂರಿನ ಯೋಗಾನಂದೇಶ್ವರ ಸರಸ್ವತಿ ಮಠದ ಶಂಕರ ಭಾರತಿ ಸ್ವಾಮೀಜಿ, ಹರಿಹರಪುರದ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ, ಕೂಡ್ಲಿ ಶೃಂಗೇರಿಮಠದ ವಿದ್ಯಾವಿಶ್ವೇಶ್ವರ ಸ್ವಾಮೀಜಿ, ಹೊಳೆನರಸಿಪುರದ ಅಧ್ಯಾತ್ಮ ಪ್ರಕಾಶದ ಪ್ರಕಾಶಾನಂದೇಂದ್ರ ಸರಸ್ವತೀ ಸ್ವಾಮೀಜಿ, ಎಡನೀರು ಮಠದ ಸಚ್ಚಿದಾನಂದ ಭಾರತಿ ಸ್ವಾಮೀಜಿ, ನೆಲೆಮಾವು ಮಠದ ಮಾಧವಾನಂದ ಭಾರತೀ ಸ್ವಾಮೀಜಿ, ತುರವೆಕೆರೆಯ ಪ್ರಣವಾನಂದ ತೀರ್ಥ ಸ್ವಾಮೀಜಿ, ಕಾಂಚಿಪುರಂನ ಆತ್ಮಬೋಧ ತೀರ್ಥ ಸ್ವಾಮೀಜಿ, ಸಹಜಾನಂದ ತೀರ್ಥ ಸ್ವಾಮೀಜಿ, ಅಂಜನಾನಂದತೀರ್ಥ ಸ್ವಾಮೀಜಿ ಮತ್ತಿತರರು ಪಾಲ್ಗೊಳ್ಳುವರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.