ಪ್ರಜಾವಾಣಿ ವಾರ್ತೆ
ಸಿದ್ದಾಪುರ: ಮಕ್ಕಳಲ್ಲಿ ಅಗಾಧವಾದ ಪ್ರತಿಭೆ ಇದೆ. ಅವರಲ್ಲಿರುವ ಪ್ರತಿಭೆಯನ್ನು ಹೊರಹಾಕಲು ಬೇಸಿಗೆ ಶಿಬಿರಗಳು ಸಹಕಾರಿಯಾಗಿವೆ ಎಂದು ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕೆ.ಆರ್.ವಿನಾಯಕ ಹೇಳಿದರು.
ತಾಲ್ಲೂಕಿನ ಕೋಲಸಿರ್ಸಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಧಾರ್ ಶಿಕ್ಷಣ, ಸ್ವ-ಉದ್ಯೋಗ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯಿಂದ ಸಂಘಟಿಸಿರುವ ಪತ್ರಕರ್ತ ದಿ. ಶಿವಶಂಕರ್ ಕೋಲಶಿರ್ಸಿ ಅವರ ನೆನಪಿನ ‘ಕಲರವ- 2025’ ಮಕ್ಕಳ ಬೇಸಿಗೆ ಶಿಬಿರ ಉದ್ಘಾಟಿಸಿ ಶುಕ್ರವಾರ ಮಾತನಾಡಿದರು.
ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಗಂಗಾಧರ್ ಕೊಳಗಿ ಮಾತನಾಡಿ, ಮಕ್ಕಳಲ್ಲಿರುವ ಪ್ರತಿಭೆಗಳನ್ನು ಹೊರಗೆ ತೆಗೆಯುವ ಮತ್ತು ಪ್ರೋತ್ಸಾಹಿಸವ ಕೆಲಸ ಆಗಬೇಕು ಎಂದರು.
ಮಾಧ್ಯಮ ಪ್ರತಿನಿಧಿಗಳ ಸಂಘದ ಅಧ್ಯಕ್ಷ ಕನ್ನೇಶ್ ನಾಯ್ಕ್ ಕೋಲಶಿರ್ಸಿ ಮಾತನಾಡಿದರು.
ಆಧಾರ್ ಶಿಕ್ಷಣ, ಸ್ವ-ಉದ್ಯೋಗ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ನಾಗರಾಜ್ ನಾಯ್ಕ್ ಮಾಳ್ಕೋಡ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕೋಲಸಿರ್ಸಿ ಗ್ರಾಮ ಪಂಚಾಯಿತಿ ಸದಸ್ಯ ಗೋವಿಂದ ಬಿ .ನಾಯ್ಕ್, ಎಸ್‌ಡಿಎಂಸಿ ಅಧ್ಯಕ್ಷ ಕೆರಿಯ ಆರ್ ನಾಯ್ಕ್, ಬಿಎಸ್ಎನ್‌ಡಿಪಿ ತಾಲ್ಲೂಕು ಅಧ್ಯಕ್ಷ ವಿನಾಯಕ್ ನಾಯ್ಕ ದೊಡ್ಡಗದ್ದೆ ಮಾತನಾಡಿದರು. ಸೇವಾ ಸಹಕಾರಿ ಸಂಘದ ಮಾಜಿ ನಿರ್ದೇಶಕ ಕೆ ಆರ್ ನಾಯ್ಕ್ ಕೋಲಶಿರ್ಸಿ, ಕರಾಟೆ ತರಬೇತುದಾರ ಪುನೀತ್ ನಾಯ್ಕ ಕೊಂಡ್ಲಿ ಇದ್ದರು.
ಶಿಬಿರದ ಸಂಯೋಜಕ ಪ್ರಶಾಂತ ಡಿ. ಶೇಟ್ ಸ್ವಾಗತಿಸಿದರು. ಸಂಸ್ಥೆಯ ಸಂಯೋಜಕ ಸುರೇಶ್ ಕಡಕೇರಿ ನಿರೂಪಿಸಿದರು. ಸಹ ಸಂಯೋಜಕ ಟಿ.ಕೆ.ಎಂ.ಆಜಾದ್ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.