ADVERTISEMENT

ಮರಾಠಾ ಸಮಾವೇಶ: ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲು ಕರೆ

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2022, 15:20 IST
Last Updated 16 ಆಗಸ್ಟ್ 2022, 15:20 IST
ಮುಂಡಗೋಡದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಮರಾಠಾ ಸಮಾವೇಶವನ್ನು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಹಾಗೂ ಗಣ್ಯರು ಉದ್ಘಾಟಿಸಿದರು
ಮುಂಡಗೋಡದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಮರಾಠಾ ಸಮಾವೇಶವನ್ನು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಹಾಗೂ ಗಣ್ಯರು ಉದ್ಘಾಟಿಸಿದರು   

ಮುಂಡಗೋಡ: ಜಿಲ್ಲೆಯ ಕಾರವಾರ, ಹಳಿಯಾಳ ಹಾಗೂ ಮುಂಡಗೋಡ ತಾಲ್ಲೂಕುಗಳಲ್ಲಿ ಮರಾಠಾ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಸಮುದಾಯದವರ ಅಭಿವೃದ್ಧಿಗೆ ರಾಜ್ಯ ಬಿಜೆಪಿ ಸರ್ಕಾರದಿಂದ ನಿಗಮ ಸ್ಥಾಪಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಸಮುದಾಯವು ಸಮಾಜಕ್ಕೆ ಶಕ್ತಿ ಕೊಡುವ ಕಾಲಘಟ್ಟಕ್ಕೆ ಬಂದಿದೆ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಹೇಳಿದರು.

ಇಲ್ಲಿನ ಎಪಿಎಂಸಿ ಸಭಾಭವನದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಮರಾಠಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಮರಾಠಾ ಸಮುದಾಯವನ್ನು ಹಿಂದುಳಿದ ವರ್ಗ ‘2ಎ’ಗೆ ಸೇರಿಸಬೇಕೆಂಬ ಬೇಡಿಕೆ ಇಟ್ಟಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈಚೆಗೆ ನಡೆದ ರಾಜ್ಯಮಟ್ಟದ ಮರಾಠಾ ಸಮಾಜದ ಸಮಾವೇಶದಲ್ಲಿ ಸಕಾರಾತ್ಮವಾಗಿ ಸ್ಪಂದಿಸಿದ್ದಾರೆ. ಸಮುದಾಯದವರ ಬೇಡಿಕೆ ಶೀಘ್ರವೇ ಈಡೇರಲಿದೆ. ಯಾವುದೇ ಸಮುದಾಯ ಮುಂದೆ ಬರಬೇಕಾದರೆ, ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವಲ್ಲಿ ಪಾಲಕರು ಹೆಚ್ಚಿನ ಗಮನ ಹರಿಸಬೇಕು ಎಂದು ಹೇಳಿದರು.

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ವಿ.ಎಸ್.ಪಾಟೀಲ ಮಾತನಾಡಿ, ಸಮಾಜದ ಹೆಸರನ್ನು ಹೇಳಿ ದೊಡ್ಡವರು ಆಗುವುದಕ್ಕಿಂತ, ಸಮಾಜವನ್ನು ದೊಡ್ಡದಾಗಿಸುವ ಕೆಲಸ ಮಾಡಬೇಕು. ಸಮುದಾಯದ ಬಗ್ಗೆ ಅಭಿಮಾನ ಇರಬೇಕು. ಇತರ ಸಮುದಾಯದವರ ಪ್ರೀತಿ, ವಿಶ್ವಾಸವನ್ನು ಗಳಿಸಿಕೊಂಡು ಸಮುದಾಯ ಬೆಳೆಯಬೇಕು ಎಂದರು.

ADVERTISEMENT

ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ.ಎಂ.ಜಿ.ಮುಳೆ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಲ್.ಟಿ.ಪಾಟೀಲ, ಮರಾಠಾ ಸಮುದಾಯದ ಮುಖಂಡ ವಿಜಯ ಜಾಧವ ಮಾತನಾಡಿದರು.

ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜಯಸುಧಾ ಭೋವಿ, ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ಪ್ರಮೋದ ಢವಳೆ, ಬಿಜೆಪಿ ಮಂಡಲ ಅಧ್ಯಕ್ಷ ನಾಗಭೂಷಣ ಹಾವಣಗಿ, ಡಿ.ಎಫ್.ಮಡ್ಲಿ, ನಿಂಗಜ್ಜ ಕೋಣನಕೇರಿ, ದೇವು ಪಾಟೀಲ, ಬಾಬಣ್ಣ ಕೋಣನಕೇರಿ, ವೈ.ಪಿ.ಪಾಟೀಲ, ನಾಗರಾಜ ಬೆಣ್ಣಿ, ವಿಠ್ಠಲ ಬಾಳಂಬೀಡ, ಗಿರೀಶ ಓಣಿಕೇರಿ, ನಾಗರಾಜ ಸಂಕನಾಳ, ಉದಯ ಬೆಂಡ್ಲಗಟ್ಟಿ, ಸತೀಶ ಹರಿಹರ, ಶಿವರಾಜ ಸುಬ್ಬಾಯವರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.